ಸೀತಾ ರಾಮಚಂದ್ರಸ್ವಾಮಿ ರಥೋತ್ಸವ

ದೊಡ್ಡಬಳ್ಳಾಪುರ: ತಾಲ್ಲೂ ಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಕಾವತಿ ಕ್ಷೇತ್ರದಲ್ಲಿ 69ನೇ ವರ್ಷದ ಶ್ರೀಸೀತಾ ರಾಮಚಂದ್ರಸ್ವಾಮಿಯ ಬ್ರಹ್ಮ ರಥೋತ್ಸವ ಮಂಗಳವಾರ ಸಂಭ್ರಮದಿಂದ ನಡೆಯಿತು.
ರಥೋತ್ಸವದ ಅಂಗವಾಗಿ ಸೋಮವಾರ ಸಂಜೆ ಸೀತಾರಾಮ ಕಲ್ಯಾಣೋತ್ಸವ ಹಾಗೂ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆದವು.
ತಾಲ್ಲೂಕಿನ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ರಥಕ್ಕೆ ಹೂವು, ಹಣ್ಣು ಸಮರ್ಪಿಸಿ ದೇವರ ದರ್ಶನ ಪಡೆದರು. ಹೋಮ, ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಶಾಸಕ ಟಿ. ವೆಂಕಟರಮಣಯ್ಯ
ಭಾಗವಹಿಸಿದ್ದರು.
ಹಮಾಮ್, ಶಿವಪುರ, ಮುತ್ಸಂದ್ರ ಗ್ರಾಮಸ್ಥರಿಂದ ಪ್ರಸಾದ ವಿನಿಯೋಗ ನಡೆಯಿತು. ಮುಜರಾಯಿ ಇಲಾಖೆಗೆ ಸೇರಿದ ಈ ದೇವಾಲಯದಲ್ಲಿ 68 ವರ್ಷಗಳಿಂದ ಬ್ರಹ್ಮ ರಥೋತ್ಸವ ನಡೆಯುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.