ತಾಲ್ಲೂಕು ಮಟ್ಟಕ್ಕೆ ಆಯ್ಕೆ

7

ತಾಲ್ಲೂಕು ಮಟ್ಟಕ್ಕೆ ಆಯ್ಕೆ

Published:
Updated:
Deccan Herald

ಕನಕಪುರ: ತಾಲ್ಲೂಕಿನ ಸಾತನೂರಿನಲ್ಲಿ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಶಾರದಾ ವಿದ್ಯಾಮಂದಿರದ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಗೆಲುವು ಸಾಧಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕರ ವಿಭಾಗದಲ್ಲಿ ಷಟಲ್‌ ಬ್ಯಾಡ್ಮಿಂಟನ್‌, ಥ್ರೋಬಾಲ್‌ ಮತ್ತು ಕುಸ್ತಿಯಲ್ಲಿ ಪ್ರಥಮ ಸ್ಥಾನ, ಪುಟ್‌ಬಾಲ್‌, ಟೇಬಲ್‌ ಟೆನ್ನಿಸ್‌ನಲ್ಲಿ ದ್ವಿತೀಯ ಸ್ಥಾನ, ಅಥ್ಲೆಟಿಕ್ಸ್‌ ಮತ್ತು ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ, 600 ಮೀ ಓಟದಲ್ಲಿ ಪ್ರಥಮಸ್ಥಾನ, 200 ಮೀ ಓಟದಲ್ಲಿ ದ್ವಿತೀಯಸ್ಥಾನ, 400 ಮೀ ಓಟದಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ಷಟಲ್‌ ಬ್ಯಾಡ್ಮಿಂಟನ್‌, ಥ್ರೋಬಾಲ್‌ ನಲ್ಲಿ ಪ್ರಥಮ ಸ್ಥಾನ, ಟೇಬಲ್‌ಟೆನ್ನಿಸ್‌ನಲ್ಲಿ ದ್ವಿತೀಯಸ್ಥಾನ, ಗುಂಡುಎಸೆತದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಮುಖ್ಯ ಶಿಕ್ಷಕ, ಸಹ ಶಿಕ್ಷಕರು, ಸಿಬ್ಬಂದಿ ವರ್ಗದವರು ವಿಜೇತ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !