ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ನಾಗರಿಕರ ಕ್ರೀಡಾಕೂಟ

Last Updated 23 ಸೆಪ್ಟೆಂಬರ್ 2021, 3:58 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಅ. 1ರಂದು ನಡೆಯಲಿರುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಬುಧವಾರ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ನಡೆದವು. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಕ್ರೀಡಾಕೂಟಕ್ಕೆ ಹಸಿರು ನಿಶಾನೆ ತೋರುವ ಮುಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಜಿಲ್ಲೆಯ ನಾಲ್ಕು ತಾಲ್ಲೂಕಿನಿಂದ ಆಗಮಿಸಿರುವ ಹಿರಿಯ ನಾಗರಿಕರಿಗೆ ಕ್ರೀಡಾ ಮನೋಭಾವ ಮತ್ತು ಕಲೆಯನ್ನು ತೋರ್ಪಡಿಸಲು ಅವಕಾಶ ಕಲ್ಪಿಸಲಾಗಿದೆ. ಪುರುಷರು, ಮಹಿಳೆಯರಿಗೆ ಪ್ರತ್ಯೇಕವಾಗಿ ವಯಸ್ಸಿಗೆ ಅನುಗುಣವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗಿದೆ. ಕ್ರೀಡಾಕೂಟದಲ್ಲಿ ಭಾಗವಹಿಸಿ ತಮ್ಮ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಜಗದೀಶ್‌ ಮಾತನಾಡಿ, ವಿಶ್ವದಾದ್ಯಂತ ನಡೆಯುವ ಹಿರಿಯ ನಾಗರಿಕರ ದಿನಾಚರಣೆ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗಿದೆ ಎಂದು
ಹೇಳಿದರು.

ಇದರಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳಲ್ಲಿ ವಿಜೇತರಾದವರಿಗೆ ಜಿಲ್ಲಾ ಮಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಮತ್ತು ಬಹುಮಾನ ವಿತರಣೆ ಮಾಡಲಾಗುವುದು. ಸಾಕಷ್ಟು ಹಿರಿಯ ನಾಗರಿಕರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ತಹಶೀಲ್ದಾರ್ ಟಿ.ಎಸ್. ಶಿವರಾಜು, ಸಿಡಿಪಿಒ ಅನಿತಾಲಕ್ಷ್ಮಿ, ನಿವೃತ್ತ ಸರ್ಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷ ಕೆ. ಮಹಾಲಿಂಗಯ್ಯ ಹಾಗೂ ತಾಲ್ಲೂಕಿನ ಹಿರಿಯ ನಾಗರಿಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT