ದೊಡ್ಡಬಳ್ಳಾಪುರ:‘ತಾವು ಗಳಿಸಿದ ಸಂಪತ್ತಿನಲ್ಲಿ ಸ್ವಲ್ಪ ಮಟ್ಟಿಗಾದರೂ ಸತ್ಕಾರ್ಯಗಳಿಗೆ ಮೀಸಲಿಡುವ ಮೂಲಕ ನಮ್ಮ ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕು’ ಎಂದು ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದಗಿರಿ ಸ್ವಾಮೀಜಿ ಹೇಳಿದರು.

ಅವರು ನಗರದ ಲಯನ್ಸ್ ಭವನದಲ್ಲಿ ನಡೆದ ಲಯನ್ಸ್ ಕ್ಲಬ್ನ ಉಚಿತ ಕಣ್ಣಿನ ಪರೀಕ್ಷಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ಆರೋಗ್ಯ ಸಂಪತ್ತು ಎಲ್ಲ ಸಂಪತ್ತಿಗಿಂತ ಮುಖ್ಯ. ಇದನ್ನು ಗಳಿಸಲು ನಾವು ಶ್ರಮ ಪಡಬೇಕಾಗುತ್ತದೆ. ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುವ ಸಮುದಾಯ ಹಾಗೂ ಸಂಘಟನೆಗಳ ಕಾರ್ಯ ಶ್ಲಾಘನೀಯ’ ಎಂದರು.

ಬಿಜಿಪಿ ಮುಖಂಡ ಹಾಗೂ ಶಿಬಿರದ ಪ್ರಾಯೋಜಕ ಬಿ.ಸಿ.ನಾರಾಯಣಸ್ವಾಮಿ ಮಾತನಾಡಿ, ‘ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಲಯನ್ಸ್ ಸಂಸ್ಥೆಯ ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರಗಳು, ಇದುವರೆಗೂ ಲಕ್ಷಾಂತರ ಜನರಿಗೆ ದಾರಿದೀಪವಾಗಿವೆ. ಶರೀರಕ್ಕೆ ಪ್ರಧಾನವಾದ ಕಣ್ಣಿನ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿದೆ. ಬಡಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ನೆರವಾಗುತ್ತಿರುವ ಲಯನ್ಸ್ ಕ್ಲಬ್ನಂತಹ ಸೇವಾ ಸಂಸ್ಥೆಗಳ ಪಾತ್ರ ಶ್ಲಾಘನೀಯ. ಲಯನ್ಸ್ ಸೇವಾ ಚಟುವಟಿಕೆಗಳು ಇನ್ನಷ್ಟು ವಿಸ್ತರಿಸಲಿ’ ಎಂದು ಹಾರೈಸಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಮೋಹನ್ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮುಖಂಡ ಬಿ.ಸಿ.ನಾರಾಯಣಸ್ವಾಮಿ ಶಿಬಿರವನ್ನು ಪ್ರಾಯೋಜಿಸಿದ್ದರು.

ಲಯನ್ಸ್ ಕ್ಲಬ್ ಕಾಯದರ್ಶಿ ಕೆ.ಶಿವಶಂಕರ್, ಖಜಾಂಚಿ ಕೆ.ಜಿ.ಗೋಪಾಲ್, ಸಹ ಕಾಯದರ್ಶಿ ಪುಷ್ಪಾಶಿವಶಂಕರ್, ಲಯನ್ಸ್ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ಎಲ್.ಕೃಷ್ಣಮೂರ್ತಿ, ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷ ಕೆ.ವಿ.ಪ್ರಭುಸ್ವಾಮಿ, ಲಯನ್ಸ್ನ ಮಹಾದೇವ್, ಲಕ್ಕೂರ್ ಪ್ರದೀಪ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.