ದೇವನಹಳ್ಳಿ: ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಪ್ರಸಕ್ತ ಸಾಲಿನ 4 ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.

ಅಕ್ಟೋಬರ್ 1ರಿಂದ ಇಲ್ಲಿಯವರೆಗೂ ಒಟ್ಟು 11 ದೌರ್ಜನ್ಯ ಪ್ರಕರಣ ದಾಖಲಾಗಿದೆ. ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿ 11 ಪ್ರಕರಣಗಳಲ್ಲಿ ನೊಂದ 20 ಸಂತ್ರಸ್ತರಿಗೆ ಒಟ್ಟು ₹ 5.85 ಲಕ್ಷ ಪರಿಹಾರ ಧನ ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಮಾತನಾಡಿ, ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ ಸೂಕ್ತ ನ್ಯಾಯ ದೊರಕಿಸಿಕೊಡಬೇಕು.ಜೊತೆಗೆ ನೊಂದವರಿಗೆ ಸಕಾಲದಲ್ಲಿ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸಿವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪೊಲೀಸ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರಲ್ಲಿ ಕಾನೂನಿನ ಅರಿವು ಮೂಡಿಸುವ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡುವ ಪ್ರಯತ್ನ ಮಾಡಬೇಕು. ದೌರ್ಜನ್ಯ ನಿಯಂತ್ರಣದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಏರ್ಪಡಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎನ್.ಅನುರಾಧ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಟಿ.ಎಲ್.ಎಸ್. ಪ್ರೇಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜಾಗೃತಿ ಸಮಿತಿಯ ಸದಸ್ಯರು ಇದ್ದರು.

Cut-off box - ಭಯಪಡದೆ ದೂರು ನೀಡಿ ಸಮಾಜದಲ್ಲಿ ಸಮಾನತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವ್ಯಕ್ತಿಗಳ ಹಕ್ಕುಗಳನ್ನು ರಕ್ಷಿಣೆ ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಮತ್ತು ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ಸಾಮಾಜಿಕ ನ್ಯಾಯದ ಮುಖ್ಯ ಉದ್ದೇಶವಾಗಿದೆ. ಹಾಗಾಗಿ ದೌರ್ಜನ್ಯವಾದರೆ ಅಥವಾ ದೌರ್ಜನ್ಯ ಕಂಡು ಬಂದರೆ ಯಾವುದೇ ರೀತಿಯ ಭಯ ಪಡದೇ ದೂರು ನೀಡಿಬೇಕು. ಅಗತ್ಯ ವೈದ್ಯಕೀಯ ಸೇವೆ ಒದಗಿಸಿ ರಕ್ಷಣೆ ನೀಡಿ ಸಂತ್ರಸ್ತರಿಗೆ ನ್ಯಾಯ ಒಡಿಸಲಾಗುವುದು ಎಂದು ಜಿಲ್ಲಾ ಪೋಲಿಸ್ ವರಷ್ಠಾಧಿಕಾರಿ ಸಿ.ಕೆ ಬಾಬಾ ತಿಳಿಸಿದರು.

ಸಫಾಯಿ ಕರ್ಮಚಾರಿಗಳಿಗೆ ನಿವೇಶನ

ನಗರ ಪ್ರದೇಶಗಳಲ್ಲಿ ನಿವೇಶನ ಮನೆ ಒದಗಿಸಲು ಮೊದಲ ಆದ್ಯತೆಯಾಗಿ ಸಫಾಯಿ ಕರ್ಮಚಾರಿಗಳನ್ನು ಪರಿಗಣಿಸಲಾಗುವುದು. ಮನೆ ಇಲ್ಲದಿರುವ ಸಫಾಯಿ ಕರ್ಮಚಾರಿಗಳಿಗೆ ನಿವೇಶನವನ್ನು ಶೀಘ್ರವಾಗಿ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ತಿಳಿಸಿದರು. ಸಾಫಾಯಿ ಕರ್ಮಚಾರಿಗಳ ಕುಟುಂಬಗಳಿಗೆ ವ್ಯಾಪಾರ ವ್ಯವಹಾರಕ್ಕಾಗಿ ವಿವಿಧ ಕೌಶಲ್ಯ ತರಬೇತಿ ಮಾರ್ಗದರ್ಶನ ನೀಡಿ ಸರ್ಕಾರದಿಂದ ಸಿಗುವಂತಹ ಸಾಲ ಸೌಲಭ್ಯ ಕಲ್ಪಿಸಿ ಕೆಲಸಕ್ಕೆ ಬೇಕಾಗುವ ಅಗತ್ಯ ಪರಿಕರ ಅವರಿಗೆ ಒದಗಿಸುವುದರ ಜೊತೆಗೆ ವೇತನ ಪಾವತಿಯಲ್ಲಿ ವಿಳಂಬವಾಗದಂತೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.