ಮಂಗಳವಾರ, ಜೂನ್ 15, 2021
27 °C
ಆನೇಕಲ್: ಶ್ರದ್ಧಾಭಕ್ತಿಯಿಂದ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ಭಕ್ತರು

ಎಲ್ಲೆಡೆ ಶ್ರಾವಣ ಶನಿವಾರ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ಶ್ರಾವಣ ಮಾಸದ ಕಡೆ ಶನಿವಾರದ ಅಂಗವಾಗಿ ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ಅಭಿಷೇಕ, ವಿಶೇಷ ಅಲಂಕಾರ, ಪೂಜೆ ನಡೆದವು.

ವಿವಿಧ ಗ್ರಾಮಗಳ ಸಹಸ್ರಾರು ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಎಲ್ಲಾ ದೇವಾಲಯಗಳಲ್ಲೂ ಭಕ್ತರು ಮಾಸ್ಕ್‌ ಧರಿಸಿ ಸರತಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಕಂಡುಬಂತು. 

ಪಟ್ಟಣದ ಅಧಿದೈವ ಶ್ರೀ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದಲೂ ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ಭಜನೆ, ವಿಷ್ಣು ಸಹಸ್ರನಾಮ ಪಾರಾಯಣ ನಡೆಸಿದರು. ಕೊರೊನಾ ನಡುವೆಯೂ ಭಕ್ತರು ದೇವರ ದರ್ಶನಕ್ಕಾಗಿ ಧಾವಿಸಿದ್ದರಿಂದ ಅಂತರ ಕಾಯ್ದಕೊಂಡ ಕಾರಣ ಉದ್ದನೆಯ ಸರತಿ ಸಾಲುಗಳು ಕಂಡುಬಂದವು.

ಪಟ್ಟಣದ ಚನ್ನಕೇಶವಸ್ವಾಮಿ ದೇವಾಲಯಲ್ಲೂ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ರಾಮಕೃ‍‍ಷ್ಣಾಪುರದಲ್ಲಿನ ಪ್ರಸನ್ನ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ನಡೆಯಿತು. ಪಟ್ಟಣದ ಶನಿಮಹಾತ್ಮ ದೇವಾಲಯ, ಕೋಟೆ ವೆಂಕಟೇಶ್ವರ ಸ್ವಾಮಿ ದೇವಾಲಯ, ಬನ್ನೇರುಘಟ್ಟ ಚಂಪಕಧಾಮ ಸ್ವಾಮಿ ದೇವಾಲಯ, ಹೆಬ್ಬಗೋಡಿ ಅನಂತನಗರದ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ದೇವಾಲಯ, ಸರ್ಜಾಪುರ ಶ್ರೀರಾಮ ದೇವಾಲಯ, ಲಕ್ಷ್ಮೀಕುಂಟೆ ಆಂಜನೇಯ ಸ್ವಾಮಿ ದೇವಾಲಯ, ಸಬ್‌ಮಂಗಲ ಪಂಚಮುಖಿ ಆಂಜನೇಯ ಸ್ವಾಮಿ ದೇವಾಲಯ ಸೇರಿದಂತೆ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು.

ಎಲ್ಲಾ ದೇವಾಲಯಗಳಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದರು. ಗೋವಿಂದ ಗೋವಿಂದ ಎಂದು ನಾಮಸ್ಮರಣೆ ಮಾಡಿ ತಮ್ಮ ಭಕ್ತಿಯನ್ನು ಸಮರ್ಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.