ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿ ಡಿ.ಸಿ.ಶಶಿಧರ್

Last Updated 19 ಜುಲೈ 2019, 14:08 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾಚಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಡಿ.ಸಿ.ಶಶಿಧರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಎಚ್‌.ವಿ.ಶ್ರೀವತ್ಸ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿ ಪಡಿಸಲಾಗಿತ್ತು. ಜೆಡಿಎಸ್‌ ಸದಸ್ಯ ಜಿ.ಶಂಕರಪ್ಪ ಅವರೂ ನಾಮಪತ್ರ ಸಲ್ಲಿಸಿದ್ದರು. ಆದರೆ ಕೊನೆಗಳಿಗೆಯಲ್ಲಿ ನಾಮಪತ್ರವನ್ನು ಹಿಂದಕ್ಕೆ ಪಡೆದರು. ಹೀಗಾಗಿ ಶಶಿಧರ್ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷರ ಅಧಿಕಾರ ಅವದಿ ಇನ್ನು 20 ತಿಂಗಳು ಇದೆ ಎಂದು ಚುನಾವಣಾ ಅಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಸಿ.ಮಂಜುನಾಥ್ ತಿಳಿಸಿದ್ದಾರೆ.

ಡಿ.ಸಿ.ಶಶಿಧರ್ ಮಾತನಾಡಿ, ‘ಪಕ್ಷದ ಎಲ್ಲರ ಸಹಕಾರದಿಂದ ಅಧ್ಯಕ್ಷನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಪಕ್ಷದ ಮುಖಂಡರು ನೀಡಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುತ್ತೇನೆ. ತಾಲ್ಲೂಕು ಪಂಚಾಯಿತಿಯಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೂರು ವರ್ಷಗಳಿಂದ ಉತ್ತಮ ಆಡಳಿತ ನೀಡಲಾಗುತ್ತಿದೆ. ಹಿಂದಿನ ಅಧ್ಯಕ್ಷರ ಮಾರ್ಗದರ್ಶನವನ್ನು ಪಡೆದು ಮುನ್ನಡೆಯಲಾಗುವುದು’ ಎಂದರು.

ನೂತನ ಅಧ್ಯಕ್ಷರನ್ನು ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಆರ್‌.ಜಿ.ವೆಂಕಟಾಚಲಯ್ಯ, ಜಿ.ಲಕ್ಷ್ಮೀಪತಿ, ಟಿಎಪಿಎಂಸಿಎಸ್‌ ನಿರ್ದೇಶಕ ಎಂ.ಗೋವಿಂದರಾಜು, ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಚುಂಚೇಗೌಡ, ಕೆಎಂಎಫ್‌ ನಿರ್ದೇಶಕ ಬಿ.ಸಿ.ಆನಂದ್‌ಕುಮಾರ್, ಕಾಂಗ್ರೆಸ್‌ ಗ್ರಾಮಾಂತರ ಬ್ಲಾಕ್‌ ಅಧ್ಯಕ್ಷ ಎಂ.ಬೈರೇಗೌಡ, ಕಸಬಾ ಬ್ಲಾಕ್‌ ಅಧ್ಯಕ್ಷ ವೆಂಕಟೇಶ್‌, ತೂಬಗೆರೆ ಹೋಬಳಿ ಬ್ಲಾಕ್‌ ಅಧ್ಯಕ್ಷ ಎನ್‌.ರಂಗಪ್ಪ, ಮುಖಂಡರಾದ ತಿ.ರಂಗರಾಜು, ಕೆ.ಎಸ್‌. ರವಿಕುಮಾರ್‌, ಆರ್‌.ವಿ.ಗೌಡ, ರಾಜ್‌ಕುಮಾರ್‌, ಆದಿತ್ಯನಾಗೇಶ್, ಪು.ಮಹೇಶ್‌, ಭದ್ರಾಪುರ ಮೋಹನ್‌, ಜವಾಜಿರಾಜೇಶ್‌ ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT