ಕನಸವಾಡಿ(ದೊಡ್ಡಬಳ್ಳಾಪುರ): ತಾಲ್ಲೂಕಿನ ಮಧುರೆ ಹೋಬಳಿಯಲ್ಲಿ ಸುಮಾರು 90 ವರ್ಷಗಳಿಂದ ಶ್ರಾವಣ ಮಾಸದ ಭಜನೆ ನಡೆಸುತ್ತ ಬರಲಾಗುತ್ತಿದೆ. ಒಂದು ತಿಂಗಳ ಕಾಲ ನಿರಂತರವಾಗಿ ಮಧುರೆ ಹೋಬಳಿಯ ಗ್ರಾಮಗಳಲ್ಲಿ ಇಸ್ತೂರು ಕೋದಂಡರಾಮಸ್ವಾಮಿ ಭಜನಾ ಮಂಡಲಿ ನೇತೃತ್ವದಲ್ಲಿ ನಡೆಯುವ ಭಜನೆ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಭಜನೆ ಕಲೆ ಜೀವಂತವಾಗಿರುವುದಕ್ಕೆ ಸಾಕ್ಷಿಯಾಗಿದೆ.

ಇಸ್ತೂರು ಗ್ರಾಮದ ಬೈರಹನುಮೇಗೌಡ ಎಂಬುವರು ಮೊದಲಿಗೆ ಶ್ರಾವಣ ಮಾಸದ ಭಜನೆಯನ್ನು ಸುಮಾರು 90 ವರ್ಷಗಳ ಹಿಂದೆ ಸಂಘಟಿಸಿದ್ದರು. ಈ ಭಜನಾ ಮಂಡಳಿಯನ್ನು ಇಂದಿಗೂ ಸಹ ಇದನ್ನು ನಿರ್ವಹಣೆ ಮಾಡುತ್ತ ಬರಲಾಗುತ್ತಿದೆ ಎನ್ನುತ್ತಾರೆ ಭಜನಾ ಮಂಡಳಿ ಅಧ್ಯಕ್ಷರಾಗಿರುವ ಚನ್ನಾದೇವಿ ಅಗ್ರಹಾರ ಗ್ರಾಮದ ನಂಜೇಗೌಡ, ಉಪಾಧ್ಯಕ್ಷ ಇಸ್ತೂರು ರಾಮಯ್ಯ, ಕಾರ್ಯದರ್ಶಿ ಗಂಡರಗೂಳಿಪುರದ ಹನುಮಂತರಾಯಪ್ಪ, ಖಜಾಂಚಿ ಹೊನ್ನಾದೇವಿಪುರ ಗ್ರಾಮದ ಮಹಾದೇವಯ್ಯ.

ಈ ಬಾರಿ ಶ್ರಾವಣ ಮಾಸದ ಮೊದಲ ದಿನ ಇಸ್ತೂರು ಗ್ರಾಮದಲ್ಲಿ ಭಜನೆ ಆರಂಭವಾಗಿದೆ. ಶ್ರಾವಣ ಮಾಸದ ಕೊನೆಯ ದಿನ ಮಲ್ಲೋಹಳ್ಳಿ ಗ್ರಾಮದಲ್ಲಿ ಕೊನೆಗೊಳ್ಳುತ್ತದೆ. ಭಜನೆ ಕಾರ್ಯಕ್ರಮದ ಸಮಾರೋಪ ಗೊಲ್ಲಹಳ್ಳಿ ಬೈಲಾಂಜ ನೇಯಸ್ವಾಮಿ ದೇವಾಲಯದಲ್ಲಿ ಪ್ರತಿವರ್ಷ ನಡೆಯುತ್ತದೆ. ಮಧುರೆ ಹೋಬಳಿಯ ಸುಮಾರು 25 ಗ್ರಾಮಗಳಲ್ಲಿ ಭಜನಾ ತಂಡ ಗರುಡು ಕಂಬದೊಂದಿಗೆ ಸಂಚರಿಸಲಿದೆ.

ಶ್ರಾವಣ ಮಾಸದ ಭಜನಾ ಕಾರ್ಯಕ್ರಮದಲ್ಲಿ ಹಾರ್ಮೋನಿಯಂ, ತಬಲ, ತಾಳ ಮುಂತಾದ ವಾಧ್ಯಗಳ ಪರಿಕರಗಳೊಂದಿಗೆ ಕಲಾವಿದರು ಪುರಂದರದಾಸ, ಕನಕದಾಸರ,ತತ್ವ ಪದಕಾರರು, ಶಿಶುನಾಳ ಷರೀಫ್, ಜನಪದರು ಮುಂತಾದವರು ರಚಿಸಿರುವ ಸಾಹಿತ್ಯವನ್ನು ಕಲಾವಿದವರು ಹಾಡುತ್ತಾರೆ.ಹರಿಕಥಾ ವಿದ್ವಾಂಸರು, ವಿವಿಧ ಗ್ರಾಮಗಳಲ್ಲಿರುವ ಭಜನಾ ಮಂಡಲಿಯ ಸದಸ್ಯರುಗಳು ಶ್ರಾವಣ ಮಾಸದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.