ಜಾಲಪ್ಪ ಹೆಸರಲ್ಲಿ ಪ್ರಶಸ್ತಿಗೆ ಒತ್ತಾಯ
ಕೃಷಿ ಹಾಗೂ ಸಹಕಾರ ಕ್ಷೇತ್ರದಲ್ಲಿ ಸಾಧನೆ ಸಲ್ಲಿಸಿರುವ ಆರ್.ಎಲ್.ಜಾಲಪ್ಪ ಹೆಸರಿನಲ್ಲಿ ಪ್ರಶಸ್ತಿ ನೀಡುವ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಸಹಕಾರ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿದ್ದಾರೆ. ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಪ್ರಶಸ್ತಿ ಸ್ಥಾಪನೆ ಮಾಡಬೇಕು. ಸರ್ಕಾರದಿಂದಲೇ ಜಿಲ್ಲೆಯಲ್ಲಿ ಜನ್ಮಶತಮಾನೋತ್ಸವ ಆಚರಿಸಬೇಕೆಂದು ಮಾಜಿ ವಿಧಾನ ಪರಿಷತ್ ಸಭಾಪತಿ ವಿ.ಆರ್.ಸುದರ್ಶನ ಒತ್ತಾಯಿಸಿದರು.