ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೊಡ್ಡಬಳ್ಳಾಪುರ: ಸಿದ್ದರಾಮೇಶ್ವರ ಜಯಂತ್ಯುತ್ಸವ

Published 15 ಜನವರಿ 2024, 15:42 IST
Last Updated 15 ಜನವರಿ 2024, 15:42 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸಿದ್ದರಾಮೇಶ್ವರ ಜಯಂತಿ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ಆಚರಿಸಲಾಯಿತು.

ಶಾಸಕ ಧೀರಜ್‌ ಮುನಿರಾಜ್‌ ಮಾತನಾಡಿ, ಸಿದ್ದರಾಮೇಶ್ವ ಅವರು ಶ್ರಮಿಕ ವರ್ಗದಲ್ಲಿ ಜನಿಸಿ, 12ನೇ ಶತಮಾನದಲ್ಲೇ ದೀರ್ಘಕಾಲಿನ ಜನೋಪಯೋಗಿ ಕೆಲಸಗಳ ಮೂಲಕ ವಚನಕಾರರಲ್ಲೇ ಭಿನ್ನವಾಗಿ ಗುರುತಿಸಿಕೊಂಡಿದ್ದಾರೆ ಎಂದರು.

ಕೆರೆ, ಕುಂಟೆಗಳನ್ನು ಕಟ್ಟಿಸಿ ಜನ, ಪ್ರಾಣಿ ಪಕ್ಷಿ ಸೇರಿದಂತೆ ಇಡೀ ಪ್ರಕೃತಿ ಸುಂದರವಾಗಿರುವಂತೆ ಮಾಡಿದ ಸಿದ್ದರಾಮೇಶ್ವರ ಅವರ ಸಮಾಜ ಸೇವೆ ಇಂದಿಗೂ ಮಾದರಿ. ಸರಳ ಭಾಷೆ ಮೂಲಕ ಸಾಮಾನ್ಯ ಜನರೂ ಅರ್ಥಮಾಡಿಕೊಳ್ಳುವಂತೆ ಜೀವನದ ಮೌಲ್ಯಗಳನ್ನು ವಚನಗಳ ಮೂಲಕ ಅರಿತುಕೊಳ್ಳುವಂತೆ ರಚಿಸಿದ್ದಾರೆ. ಅಂತಹ ಮಹನೀಯರ ಸಾಧನೆ ನಮಗೆ ಸ್ಫೂರ್ತಿಯಾಗಬೇಕಿದೆ ಎಂದರು.

ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಕಸಬಾ ಹೋಬಳಿ ರಾಜಸ್ವ ನಿರೀಕ್ಷಕ ಸುಂದರರಾಜ್, ಗ್ರಾಮ ಲೆಕ್ಕಾಧಿಕಾರಿ ಎಚ್.ಎಸ್.ರಾಜೇಂದ್ರಬಾಬು ಸೇರಿದಂತೆ ಭೋವಿ ಸಮುದಾಯದ ಮುಖಂಡರಾದ ಓಬದೇನಹಳ್ಳಿ ಮುನಿಯಪ್ಪ, ಬಸವರಾಜ್‌, ರಾಮಕೃಷ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT