ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದುರ್ಬಲ ಮತಗಟ್ಟೆ ಕೇಂದ್ರಗಳಿಗೆ ಭೇಟಿ

Published 4 ಏಪ್ರಿಲ್ 2024, 14:55 IST
Last Updated 4 ಏಪ್ರಿಲ್ 2024, 14:55 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ತಾಲ್ಲೂಕಿನ ದುರ್ಬಲ ಮತಗಟ್ಟೆ ಕೇಂದ್ರದ ಮತದಾರರು ನಿರ್ಭೀತಿಯಿಂದ ಮತದಾನದ ಹಕ್ಕು ಚಲಾಯಿಸಬೇಕು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜ ತಿಳಿಸಿದರು.

ತಾಲ್ಲೂಕು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ದುರ್ಬಲ ಮತಗಟ್ಟೆ ಕೇಂದ್ರಗಳಾದ ಮಿಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದನವನ, ಸಾದಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಣಗಾನಹಳ್ಳಿ ಗ್ರಾಮ, ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಮಡುಗು ಗ್ರಾಮಗಳಿಗೆ ಭೇಟಿ ನೀಡಿ, ಮತದಾರರಲ್ಲಿ ಮತದಾನ ಮಾಡುವ ಉತ್ಸಹ ತುಂಬಿದರು.

ಮತದಾರರು ಆಮಿಷಗಳಿಗೆ ಒಳಗಾಗಬಾರದು. ಜೀವ ಬೆದರಿಕೆ, ಒತ್ತಡ, ಆಮಿಷವೊಡ್ಡುವ ಅಥವಾ ಪ್ರಭಾವ ಬೀರುವ ಅಭ್ಯರ್ಥಿಗಳ ಹಾಗೂ ಹಿಂಬಾಲಕರ ವಿರುದ್ಧ ನೇರವಾಗಿ ಚುನಾವಣೆ ಆಯೋಗದ ಅಧಿಕಾರಿಗಳಿಗೆ ದೂರು ನೀಡಬಹುದು. ದೂರು ಸ್ವೀಕಾರವಾದರೆ, ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದರು.

ಸ್ವೀಪ್ ಸಮಿತಿಯಿಂದ ಅಧಿಕಾರಿಗಳು ದುರ್ಬಲ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರಿಗೆ ಧೈರ್ಯ ತುಂಬಿದರು. ಪ್ರತಿಯೊಬ್ಬರೂ ನಿರ್ಭೀತಿಯಿಂದ ಮತದಾನ ಚಲಾಯಿಸುವಂತೆ ಮನವೊಲಿಸಿದರು.

ತಾಲ್ಲೂಕು ಸಹಾಯಕ ಚುನಾವಣಾಧಿಕಾರಿ ಜಾವಿದ್ ನಜೀಮಾ ಖಾನಮ್, ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜ, ತಹಶೀಲ್ದಾರ್ ಬಿ.ಎನ್.ಸ್ವಾಮಿ, ಸರ್ಕಲ್ ಇನ್ ಸ್ಪೆಕ್ಟರ್ ಶ್ರೀನಿವಾಸ್, ಸಾದಲಿ, ಮಿಟ್ಟಹಳ್ಳಿ, ದೊಡ್ಡತೇಕಹಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಪೋಲೀಸ್ ಇಲಾಖೆ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT