ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಳ ಬಕ್ರೀದ್‌ ಆಚರಣೆ

Last Updated 22 ಜುಲೈ 2021, 4:12 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ:ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ತಾಲ್ಲೂಕಿನಲ್ಲಿ ಮುಸ್ಲಿಂಮರು ಬುಧವಾರ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.

ಕೋವಿಡ್-19 ಮಾರ್ಗಸೂಚಿ ಹಿನ್ನೆಲೆಯಲ್ಲಿ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಅವಕಾಶ ಇರಲಿಲ್ಲ.

ಬಕ್ರೀದ್ ಅಂಗವಾಗಿ ಮಸೀದಿಗಳಲ್ಲಿ ಸೀಮಿತ ಜನರಿಂದ ವಿಶೇಷ ಪ್ರಾರ್ಥನೆ, ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿ
ಕೊಂಡರು.

ಮುಸ್ಲಿಂ ಗುರುಗಳಿಂದ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು. ನಗರ ಹಾಗೂ ಗ್ರಾಮಾಂತರ ಪ್ರದೇಶದ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಬಕ್ರೀದ್ ಆಚರಣೆಯಲ್ಲಿ ತಮ್ಮ ಶಕ್ಯಾನುಸಾರ ಮುಸ್ಲಿಂಮರು ದಾನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT