ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯಲ್ಲಿ ಹಾದು ಹೋಗಿರುವ ಲೋಕೋಪಯೋಗಿ ಇಲಾಖೆಯ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಆರಂಭಕ್ಕೆ ಗುರುವಾರ ಶಾಸಕ ಧೀರಜ್ಮುನಿರಾಜ್ ಹಾಗೂ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿದರು.

ಈ ಬಗ್ಗೆ ಮಾಹಿತಿ ನೀಡಿದ ಶಾಸಕ ಧೀರಜ್ ಮುನಿರಾಜ್, ಬಸವ ಭವನದಿಂದ ತಾಲ್ಲೂಕು ಕಚೇರಿ ಮೂಲಕ ನೆಲಮಂಗಲ ರಸ್ತೆಯ ಕನಕದಾಸ ವೃತ್ತದವರೆಗಿನ ರಸ್ತೆಯನ್ನು ವಿಸ್ತರಿಸಿ ಡಾಂಬರೀಕರಣ, ತಾಲ್ಲೂಕು ಕಚೇರಿ ಸಮೀಪ ರಸ್ತೆಯಲ್ಲಿ ಮಳೆ ನೀರು ನಿಲ್ಲದಂತೆ ಕಾಮಗಾರಿ, ಮುಗುವಾಳಪ್ಪ ವೃತ್ತದಿಂದ ಚೌಕದ ರಸ್ತೆ ಮೂಲಕ ಗಾಂಧಿ ವೃತ್ತದವರೆಗೆ ರಸ್ತೆ ವಿಸ್ತರಣೆ, ಡಾಂಬರೀಕರಣ ಮತ್ತು ತೇರಿನ ಬೀದಿ ವೃತ್ತದ ಬಳಿ ಮಳೆ ನೀರು ನಿಲ್ಲದಂತೆ ಕಾಮಗಾರಿ ಆರಂಭಿಸಲು ಸ್ಥಳ ಪರಿಶೀಲನೆ ನಡೆಸಲಾಗಿದೆ. ಈಗಾಗಲೇ ಈ ರಸ್ತೆಗಳ ಅಭಿವೃದ್ಧಿಗೆ ₹8 ಕೋಟಿ ಅನುದಾನ ಮಂಜೂರಾಗಿದೆ ಎಂದು ತಿಳಿಸಿದರು.

ಮುಗುವಾಳಪ್ಪ ವೃತ್ತದಿಂದ ಗಾಂಧಿ ವೃತ್ತದವರೆಗಿನ ರಸ್ತೆ ಬದಿಯಲ್ಲಿನ ಖಾಸಗಿ ಸ್ವತ್ತು ಗುರುತಿಸಿ ರಸ್ತೆ ವಿಸ್ತರಣೆಗೆ ಒಳಪಡುವ ಖಾಸಗಿ ಸ್ವತ್ತುಗಳಿಗೆ ಪರಿಹಾರ ನೀಡುವ ಬಗ್ಗೆ ನಗರಸಭೆ ನಿರ್ಧಾರ ಕೈಗೊಳ್ಳಲಿದೆ. ಬೆಳೆಯುತ್ತಿರುವ ನಗರದಲ್ಲಿನ ಜನಸಂಖ್ಯೆ, ವಾಹನ ದಟ್ಟಣೆಗೆ ತಕ್ಕಂತೆ ರಸ್ತೆಗಳ ಅಭಿವೃದ್ಧಿ ಈಗ ಅನಿವಾರ್ಯವಾಗಿದೆ. ಸಾರ್ವಜನಿಕರ ಸಹಕಾರವು ಮುಖ್ಯವಾಗಿದೆ ಎಂದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಪೌರಾಯುಕ್ತ ಕಾರ್ತಿಕ್ ಈಶ್ವರ್, ಲೋಕೊಪಯೋಗಿ ಇಲಾಖೆ ಬೆಂಗಳೂರು ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆರ್.ಚಂದ್ರಶೇಖರ್, ನಗರಸಭೆ ಕಾರ್ಯಪಾಲಕ ಎಂಜಿನಿಯರ್ ರಾಮೇಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.