ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿದರಗುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಶಿವಕುಮಾರ್ ಆಯ್ಕೆ

Published : 17 ಮಾರ್ಚ್ 2023, 7:04 IST
ಫಾಲೋ ಮಾಡಿ
Comments

ಆನೇಕಲ್: ತಾಲ್ಲೂಕಿನ ಬಿದರಗುಪ್ಪೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ರಾಗಿ ಇಂಡ್ಲಬೆಲೆಯ ಶಿವಕುಮಾರ್‌ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷರಾಗಿದ್ದ ವಿಜಿ ರಮೇಶ್‌ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಶಿವಕುಮಾರ್‌ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾದರು.

ಬಳಿಕ ಮಾತನಾಡಿದ ಅವರು, ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮೂಲ ಸೌಲಭ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲಾ ಕ್ಷೇತ್ರದ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲಾಗುವುದು ಎಂದರು.

ನೂತನ ಅಧ್ಯಕ್ಷರನ್ನು ಬಮೂಲ್‌ ನಿರ್ದೇಶಕ ಬಿ.ಜಿ. ಆಂಜಿನಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಬಿ.ಬಿ.ಐ. ಮುನಿರೆಡ್ಡಿ, ಮುಖಂಡರಾದ ಅತ್ತಿಬೆಲೆ ಬಸವರಾಜು, ಗಣೇಶ್, ರಾಜೇಶ್, ಬಳ್ಳೂರು ಮಧುಕುಮಾರ್, ಮಂಜುನಾಥ್‌ ಮದ್ದೂರಪ್ಪ, ಮುರಳಿ, ಮೋಹನ್‌ ರೆಡ್ಡಿ ಅಭಿನಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT