ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸಕೋಟೆ: ಆರು ಕಿಶೋರ ಕಾರ್ಮಿಕರ ರಕ್ಷಣೆ

Published 9 ಜುಲೈ 2024, 13:59 IST
Last Updated 9 ಜುಲೈ 2024, 13:59 IST
ಅಕ್ಷರ ಗಾತ್ರ

ಹೊಸಕೋಟೆ: ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿ-1098 ಅಧಿಕಾರಿಗಳು ಜಂಟಿಯಾಗಿ ತಾಲ್ಲೂಕಿನ ನಂದಗುಡಿ ಹಾಗೂ ಪಿಲ್ಲಗುಂಪೆ ಕೈಗಾರಿಕಾ ಪ್ರದೇಶಗಳಲ್ಲಿ ಸೋಮವಾರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ನಡೆಸಿ ಆರು ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.

ದೂರುಗಳ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ಒಪ್ಪಿಸಿದ್ದಾರೆ.

ದಾಳಿಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎಸ್. ಸುಬ್ಬಾರಾವ್, ಕಾರ್ಮಿಕ ನಿರೀಕ್ಷಕ ಯತೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಭಾರತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ನರಸಿಂಹರಾಜು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಸೌಮ್ಯ, ಮಲ್ಲಿಕಾರ್ಜುನ, ಪ್ರಮೋದ್ ಹಾಜರಿದ್ದರು.

ಇದೇ ಸಂದರ್ಭದಲ್ಲಿ ನಂದಗುಡಿಯ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಅಂಗಡಿ, ಗ್ಯಾರೇಜು, ಬೇಕರಿ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಕರಪತ್ರ ಹಂಚಲಾಯಿತು.

ಯಾವುದೇ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಅಧಿಕಾರಿಗಳು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT