ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಹಾವು ಕಡಿದು ಮಗು ಸಾವು

Published 27 ಏಪ್ರಿಲ್ 2024, 14:31 IST
Last Updated 27 ಏಪ್ರಿಲ್ 2024, 14:31 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ತಾಲ್ಲೂಕಿನ ಕೋಳೂರು ಗ್ರಾಮದ ತೋಟವೊಂದರಲ್ಲಿ ಶುಕ್ರವಾರ ಸಂಜೆ  ಹಾವು ಕಡಿದು ಏಳು ವರ್ಷದ ಮಗು ಮೃತಪಟ್ಟಿದೆ.

ರಾಮಾಂಜಿ, ವಿನೋದಮ್ಮ ದಂಪತಿಯ  ಪುತ್ರಿ ಅನುಷಾ ಮೃತ ಮಗು.

ತಾಲ್ಲೂಕಿನ ತೂಬಗೆರೆ ಹೋಬಳಿ ಟಿ.ಹೊಸಹಳ್ಳಿ ಗ್ರಾಮದ ನಿವಾಸಿಗಳಾದ ರಾಮಾಂಜಿ ದಂಪತಿಗಳು ಕೋಳೂರು ಗ್ರಾಮದಲ್ಲಿನ ತೋಟವೊಂದರಲ್ಲಿ ಕೆಲಸ ಮಾಡಿಕೊಂಡು ಅಲ್ಲೇ ವಾಸವಾಗಿದ್ದರು.

ಶುಕ್ರವಾರ ಸಂಜೆ ಸುಮಾರು 6 ಗಂಟೆ‌ ಸಮಯದಲ್ಲಿ ಮಗುವಿಗೆ ಹಾವು ಕಚ್ಚಿತ್ತು. ಅಸ್ವಸ್ಥಗೊಂಡಿರುವ ಮಗುವನ್ನು ಗಮನಿಸಿದ ಪೋಷಕರು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT