ಭಾನುವಾರ, ಏಪ್ರಿಲ್ 18, 2021
33 °C

ಹಾವು ಕಚ್ಚಿ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆನೇಕಲ್: ತಾಲ್ಲೂಕಿನ ಇಂಡ್ಲವಾಡಿ ಕ್ರಾಸ್‌ ಸಮೀಪದ ನಿರ್ಮಾಣ ಹಂತದಲ್ಲಿರುವ ಕಲ್ಯಾಣ ಮಂಟಪವೊಂದರಲ್ಲಿ ಹಾವು ಕಡಿದು ತಮಿಳುನಾಡಿನ ಸತ್ಯರಾಜ್‌(34) ಮೃತಪಟ್ಟಿದ್ದಾರೆ.

ಕಲ್ಯಾಣ ಮಂಟಪದಲ್ಲಿ ವೆಲ್ಡಿಂಗ್‌ ಕೆಲಸ ಮಾಡಲು ಸತ್ಯರಾಜ್‌ ಲಾಲ್‌ಬಾಗ್‌ ಸಿದ್ದಾಪುರದಿಂದ ಆನೇಕಲ್‌ ತಾಲ್ಲೂಕಿನ ಇಂಡ್ಲವಾಡಿ ಕ್ರಾಸ್‌ಗೆ ಬಂದಿದ್ದರು. ಮಧ್ಯಾಹ್ನ ಮೊಬೈಲ್‌ನಲ್ಲಿ ಮಾತನಾಡುತ್ತಾ ನಿಂತಿದ್ದಾಗ, ಕಾಂಪೌಂಡ್ ಮೇಲಿದ್ದ ಹಾವೊಂದು ಹಣೆಯ ಮೇಲೆ ಕಚ್ಚಿದೆ. ಕೂಡಲೇ ಸತ್ಯರಾಜ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಸತ್ಯರಾಜ್‌ ಮೃತಪಟ್ಟಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ನಗರದ ಹೊರವಲಯದ ಸಿದ್ದೆನಾಯಕನಹಳ್ಳಿ ವೃತ್ತದ ಬಳಿ ಸೋಮವಾರ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಕೋಣನಕುಂಟೆ ನಿವಾಸಿ ಮೋಹನ್‌ಕುಮಾರ್(38) ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಸಹ ಪ್ರಯಾಣಿಕ ನಾಗೇಶ್ ಯಾವುದೇ ಪ್ರಾಣಪಾಯವಿಲ್ಲದೆ ಪಾರಾಗಿದ್ದಾರೆ. ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.