ವೃದ್ಧೆಯ ಸರ ಕಸಿದು ಪರಾರಿ

ವಿಜಯಪುರ (ಬೆಂ.ಗ್ರಾಮಾಂತರ): ಪಟ್ಟಣದ ಒಂದನೇ ವಾರ್ಡ್‌ನ ಬಸವೇಶ್ವರ ನಗರದಲ್ಲಿ ಸೋಮವಾರ ಸಂಜೆ ದುಷ್ಕರ್ಮಿಗಳು ವೃದ್ಧೆಯ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ವಿಜಯಮ್ಮ ಸರ ಕಳೆದುಕೊಂಡವರು. ಎಲೆ ಅಡಿಕೆ ಉಗಿಯಲು ಮನೆಯಿಂದ ಹೊರಗೆ ಬಂದಿದ್ದ ಸಮಯದಲ್ಲಿ ದ್ವಿಚಕ್ರವಾಹನದಲ್ಲಿ ಬಂದ ಅಪರಿಚಿತರು 50 ಗ್ರಾಂ ತೂಕದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸರ ಕಿತ್ತುಕೊಂಡು ಹೋಗುವ ಭರದಲ್ಲಿ ಅರ್ಧ ಸರವನ್ನು ಬೀಳಿಸಿಕೊಂಡು ಹೋಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ವೇಳೆ ಸಿಕ್ಕಿದೆ. ಅದನ್ನು ವೃದ್ಧೆಗೆ
ಹಿಂದಿರುಗಿಸಿದ್ದಾರೆ.
ಸುಮಾರು 30 ಗ್ರಾಂ.ನಷ್ಟು ತೂಕದ ಸರ ಕಿತ್ತುಕೊಂಡು ಹೋಗಿದ್ದಾರೆ. ಸರ್ಕಲ್ ಇನ್‌ಸ್ಪೆಕ್ಟರ್ ವೀರೇಂದ್ರಪ್ರಸಾದ್ ಸಿ.ಸಿ. ಕ್ಯಾಮೆರಾದಲ್ಲಿ ದಾಖಲಾಗಿರುವ ದೃಶ್ಯಾವಳಿಗಳ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.