ದೇವನಹಳ್ಳಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಕೈಗೊಳ್ಳುತ್ತಿದ್ದು, ಜಿಲ್ಲೆಯಲ್ಲೂ ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.

ಜನರ ಶೈಕ್ಷಣಿಕ ಮಟ್ಟ, ಆರ್ಥಿಕ ಸ್ಥಿತಿ, ಜಾತಿ, ಉಪಜಾತಿ, ಕೌಶಲ್ಯ ಅಗತ್ಯತೆ ಮತ್ತು ಇತರೆ ಸಾಮಾಜಿಕ ಅಂಶ ದಾಖಲಿಸಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಧಾರವನ್ನು ಒದಗಿಸುವ ಉದ್ದೇಶದಿಂದ ದತ್ತಾಂಶ ಸಂಗ್ರಹ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷೆಯು ಸುಮಾರು 60 ಪ್ರಶ್ನೆ ಒಳಗೊಂಡಿರುತ್ತದೆ. ಗಣತಿದಾರರು ಮೊಬೈಲ್ ಆ್ಯಪ್ ಮೂಲಕ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಾರೆ. ಸಮೀಕ್ಷೆಯು ಪಡಿತರ ಚೀಟಿ ಮತ್ತು ಆಧಾರ್ ಸಂಖ್ಯೆಯ ಆಧಾರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಮಟ್ಟ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಲಾಗಿದ್ದು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಕಾಲಕಾಲಕ್ಕೆ ಸಭೆ ನಡೆಸಿ ಸಮೀಕ್ಷೆಯ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗುತ್ತಿದೆ.

ಕುಟುಂಬಗಳ ಸಮೀಕ್ಷೆ

ತಾಲ್ಲೂಕು; ಕುಟುಂಬ

ದೇವನಹಳ್ಳಿ; 67,547

ದೊಡ್ಡಬಳ್ಳಾಪುರ; 1,03,903

ಹೊಸಕೋಟೆ; 88,392

ನೆಲಮಂಗಲ; 79,943

ಒಟ್ಟು; 3,34,785

ಜಿಲ್ಲೆಯ ಪ್ರತಿ ಮನೆಗೆ ಆಯೋಗದ ಸಿಬ್ಬಂದಿ ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಗಣತಿದಾರರು ಮನೆ ಮನೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಗಣತಿದಾರರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸಿ.
– ಎ.ಬಿ ಬಸವರಾಜು, ಜಿಲ್ಲಾಧಿಕಾರಿ

ಸಮೀಕ್ಷೆಗೆ 2,520 ಗಣತಿದಾರರ ಬಳಕೆ

ಜಿಲ್ಲೆಯಾದ್ಯಂತ ಸಮೀಕ್ಷೆ ಕೈಗೊಳ್ಳಲು 2520 ಗಣತಿದಾರರನ್ನು ನೇಮಿಸಲಾಗಿದೆ. ಜೊತೆಗೆ 55 ಮಾಸ್ಟರ್ ಟ್ರೈನರ್194 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಮಾಸ್ಟರ್ ಟ್ರೈನಿಂಗ್ ಪಡೆದವರು ಗಣತಿದಾರರಿಗೆ ತರಬೇತಿ ನೀಡಲಿದ್ದಾರೆ.

ಸಮೀಕ್ಷೆಯಲ್ಲಿ ಗಣತಿದಾರರೊಂದಿಗೆ ಆಶಾ ಕಾರ್ಯಕರ್ತೆಯರು ಎನ್ಎಸ್ಎಸ್ ಎನ್ಸಿಸಿ ವಿದ್ಯಾರ್ಥಿಗಳು ಭಾಗವಾಹಿಸಲಿದ್ದಾರೆ. 150 ಮನೆಗಳ ಬ್ಲಾಕ್ ರಚನೆ ‘ಸಮೀಕ್ಷೆ ಸಲುವಾಗಿ ತಲಾ 150 ಮನೆಗಳನ್ನು ಒಂದು ಬ್ಲಾಕ್ ಆಗಿ ರಚಿಸಲಾಗಿದೆ. ಬ್ಲಾಕ್ಗಳಲ್ಲಿ ಒಬ್ಬ ಗಣತಿದಾರನನ್ನು (ಎನ್ಯೂಮರೇಟರ್) ನಿಯೋಜಿಸಲಾಗುವುದು. ಅವರು ಸಮೀಕ್ಷೆ ಬಗ್ಗೆ ಪ್ರತಿ ಮನೆಗೆ ತೆರಳಿ 60 ಪ್ರಶ್ನೆಗಳನ್ನು ಆ್ಯಪ್ ಮೂಲಕ ಕೇಳುವರು. ಗಣತಿದಾರರ ಮೇಲೆ ಮೇಲ್ವಿಚಾರಕರು ಕಾರ್ಯನಿರ್ವಹಿಸುತ್ತಾರೆ.

ಸಹಾಯವಾಣಿ ಸಂಪರ್ಕ: ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಗೊಂದಲಗಳಿದ್ದಲ್ಲಿ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ರಾಜ್ಯ ಸಹಾಯವಾಣಿ ಸಂಖ್ಯೆ 8050770007ಗೆ ಕರೆ ಮಾಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.