ದೇವನಹಳ್ಳಿ: ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆದಾರರು ಕೇಳುವ ಪ್ರಶ್ನೆಗಳಿಗೆ ಸ್ಪಷ್ಟವಾಗಿ ಉತ್ತರಿಸಿ, ಯಾವುದೇ ಕಾರಣಕ್ಕೂ ಮಾಹಿತಿ ನೀಡಲು ಹಿಂಜರಿಯಬೇಡಿ. ಸಮೀಕ್ಷೆಗೆ ಬಗೆಗಿನ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎನ್ ಅನುರಾಧ ಹೇಳಿದರು.

ಪಟ್ಟಣದಲ್ಲಿ ನಡೆಯುತ್ತಿರುವ ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆಯನ್ನು ಶನಿವಾರ ಖುದ್ದು ಮನೆಮನೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಸಮೀಕ್ಷೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಇನ್ನೂ ಆಧಾರ್ ಕಾರ್ಡ್ಗೆ ಮೊಬೈಲ್ ನಂಬರ್ ಲಿಂಕ್ ಮಾಡದಿದ್ದರೆ, ಲಿಂಕ್ ಮಾಡಿಕೊಳ್ಳಬೇಕು. ಹಾಗೇ ಅಗತ್ಯ ದಾಖಲೆಗಳಿಗೆ ಕೆವೈಸಿ ಲಿಂಕ್ ಮಾಡುವುದು ಕಡ್ಡಾಯ. ಇ-ಕೈವೈಸಿ ಮಾಡಿಕೊಳ್ಳಲು ಸಾರ್ವಜನಿಕರಿಗೆ ತಿಳಿಸಿದರು.

ಸಮೀಕ್ಷೆ ಮಾಡುವ ಸಂದರ್ಭದಲ್ಲಿ ನೆರ್ಟ್ವರ್ಕ್ ಸಮಸ್ಯೆ ಕೆಲವೊಂದು ಸಂದರ್ಭಗಳಲ್ಲಿ ಉಂಟಾಗುತ್ತದೆ. ಸಾರ್ವಜನಿಕರು ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆಗೆ ಸಮರ್ಪಕವಾದ ಮಾಹಿತಿ ನೀಡಿ ಗಣತಿದಾರರಿಗೆ ಸಹಕರಿಸಿ ಎಂದರು.

ದೇವನಹಳ್ಳಿ ತಾಲ್ಲೂಕು ಇಒ ಶ್ರೀನಾಥ್ ಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿಬ್ಬಂದಿ, ಗಣತಿದಾರರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.