ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿ

Last Updated 13 ಡಿಸೆಂಬರ್ 2018, 13:20 IST
ಅಕ್ಷರ ಗಾತ್ರ

ವಿಜಯಪುರ: ಕಲಿಕೆಯಲ್ಲಿ ಹಿಂದುಳಿದಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ತರಗತಿ ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಸದುಪಯೋಗಪಡೆಯಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿ ದೇವಿ ತಿಳಿಸಿದರು.

ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಗಣಿತ, ವಿಜ್ಞಾನ, ಇಂಗ್ಲಿಷ್ ವಿಷಯಗಳಲ್ಲಿ ಕಲಿಕೆಯಿಂದ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶದ ಮೇರೆಗೆ ತರಗತಿ ನಡೆಸಲಾಗುತ್ತಿದೆ ಎಂದರು.

ಉಪಪ್ರಾಂಶುಪಾಲ ಪಿ.ವೆಂಕಟೇಶ್ ಮಾತನಾಡಿ, ಕಲಿಕೆಯಲ್ಲಿ ಹಿಂದುಳಿದಿದ್ದ ಮಕ್ಕಳಿಗೆ ವಾರಕೊಮ್ಮೆ ಪರೀಕ್ಷೆ ನಡೆಸಲಾಗುತ್ತದೆ. ಇದರಿಂದ ಅವರ ಕಲಿಕಾ ಸಾಮರ್ಥ್ಯ ಹೆಚ್ಚಾಗುತ್ತಿರುವುದರ ಜತೆಗೆ ಎಲ್ಲಾ ಮಕ್ಕಳಂತೆ ಕಲಿಯಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಸಹಶಿಕ್ಷಕರಾದ ಪಿ.ಎಂ.ಕೊಟ್ರೇಶ್, ಬಿ.ಎಸ್ ನಾರಾಯಣ್, ರಾಮಾಂಜು, ಮುನಿಶಾಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT