ಶುಕ್ರವಾರ, ಸೆಪ್ಟೆಂಬರ್ 25, 2020
21 °C

ರಾಮಮಂದಿರಕ್ಕೆ ಶಂಕುಸ್ಥಾಪನೆ: ವಿಶೇಷ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ ಪ್ರಯುಕ್ತ ಹೋಬಳಿಯ ಬಹುತೇಕ ದೇವಾಲಯಗಳಲ್ಲಿ ವಿಶೇಷ ಪೂಜೆ, ಹೋಮ, ಕಾರ್ಯಕ್ರಮಗಳನ್ನು ಬಿಜೆಪಿ ಮುಖಂಡರು ಹಮ್ಮಿಕೊಂಡಿದ್ದರು.

ಇಲ್ಲಿನ ರಾಮಮಂದಿರ ಬೀದಿಯಲ್ಲಿರುವ ಶ್ರೀರಾಮರ ದೇವಾಲಯದಲ್ಲಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಚ.ವಿಜಯಬಾಬು, ಕನಕರಾಜು, ಬಲಮುರಿ ಶ್ರೀನಿವಾಸ್, ವೆಂಕಟೇಶ್ ಪ್ರಭು ಸೇರಿದಂತೆ ಹಲವು ಮಂದಿ ಮುಖಂಡರು ಹೋಮ ಮಾಡಿಸಿದರು.

ಬೆಳಗಿನಿಂದಲೇ ವಿಶೇಷ ಪೂಜಾ ಕಾರ್ಯಕ್ರಮ ನೆರವೇರಿಸಿದ ಮುಖಂಡರು, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ಸಮರ್ಪಣೆ ಮಾಡಿದರು.

‘ಇಲ್ಲಿನ ದೇವನಹಳ್ಳಿ ಮುಖ್ಯರಸ್ತೆಯಲ್ಲಿರುವ ಬಸಪ್ಪನ ತೋಪಿನ ಬಳಿಯಿರುವ ಆಂಜನೇಯಸ್ವಾಮಿ ದೇವಾಲಯ, ಟೋಲ್ ಗೇಟ್ ಬಳಿರುವ ಅಭಯ ಆಂಜನೇಯಸ್ವಾಮಿ ದೇವಾಲಯ, ಶಿಡ್ಲಘಟ್ಟ ಕ್ರಾಸ್‌ನಲ್ಲಿರುವ ಆಂಜನೇಯಸ್ವಾಮಿ ದೇವಾಲಯ, ನಗರೇಶ್ವರಸ್ವಾಮಿ ದೇವಾಲಯ, ವೀರಭದ್ರಸ್ವಾಮಿ ದೇವಾಲಯ, ವೆಂಕಟರಮಣಸ್ವಾಮಿ ದೇವಾಲಯ, ಚನ್ನಕೇಶವಸ್ವಾಮಿ ದೇವಾಲಯ, ಭಟ್ರೇನಹಳ್ಳಿ ಸಾಯಿನಾಥ ಜ್ಞಾನಮಂದಿರ, ಸೇರಿದಂತೆ ಬಹುತೇಕ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಸಾದ ವಿನಿಯೋಗ ಮಾಡಿದರು.

ಮುಖಂಡ ಬಲಮುರಿ ಶ್ರೀನಿವಾಸ್ ಮಾತನಾಡಿ, ‘ಅನೇಕ ವರ್ಷಗಳ ಹೋರಾಟದ ಫಲವಾಗಿ ಇಂದು ನಡೆಯುತ್ತಿರುವ ಶಂಕುಸ್ಥಾಪನೆ ಕಾರ್ಯಕ್ರಮ ಐತಿಹಾಸಿಕವಾದದ್ದು. ಈ ಮಂದಿರ ಸರ್ವಧರ್ಮಗಳ ಸಾಮರಸ್ಯದ ಕೇಂದ್ರವಾಗುವುದರಲ್ಲಿ ಅನುಮಾನವಿಲ್ಲ. ಯಾವುದೇ ತೊಡಕುಗಳಿಲ್ಲದೆ ಈ ದೇವಾಲಯದ ಕಾರ್ಯಸಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ’ ಎಂದರು.

ಹೋಬಳಿ ಸೇರಿದಂತೆ ಬಹುತೇಕ ಹಳ್ಳಿಗಳಲ್ಲಿನ ದೇವಾಲಯಗಳಲ್ಲೂ ಪೂಜೆ ಸಲ್ಲಿಸಿ, ಸಿಹಿ ಹಂಚಿಕೆ ಮಾಡಿದರು. ಕೊರೊನಾ ಸೋಂಕು ಎಲ್ಲೆಡೆ ಹರಡುತ್ತಿರುವ ಕಾರಣ ಸಂಭ್ರಮಾಚರಣೆ, ಪಟಾಕಿ ಸಿಡಿಸುವುದಕ್ಕೆ, ಮೆರವಣಿಗೆ ನಡೆಸುವುದಕ್ಕೆ ಅವಕಾಶ ನೀಡಿರಲಿಲ್ಲ. ಮುಖಂಡರಾದ ಸಾಗರ್, ಆರ್.ಎಸ್.ಎಸ್. ಲೋಕೇಶ್, ನಟರಾಜ್, ರಜನಿಕನಕರಾಜು, ದೇವರಾಜು, ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು