ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ

Last Updated 25 ಡಿಸೆಂಬರ್ 2019, 16:30 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ತಾಲ್ಲೂಕಿನ ವಿವಿಧೆಡೆಗಳಲ್ಲಿ ಕ್ರಿಸ್‍ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಚರ್ಚ್‍ಗಳಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು. ಕ್ರೈಸ್ತ ಬಾಂಧವರು ಚರ್ಚ್‍ಗಳಲ್ಲಿ ಪ್ರಾರ್ಥನೆ ಸಲ್ಲಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ನಗರದ ಟಿ.ಬಿ.ವೃತ್ತದ ಬಳಿಯಿರುವ ಸಂತ ಪೇತ್ರರ ಚರ್ಚ್‍ನಲ್ಲಿ ಮಂಗಳವಾರ ಈವ್ ಅಂಗವಾಗಿ ಮಧ್ಯರಾತ್ರಿಯಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು.

ಚರ್ಚ್‍ಗಳಲ್ಲಿ ಜಗತ್ತಿಗೆ ಬೆಳಕು ನೀಡುವ ಜೀಸಸ್ ಕ್ರಿಸ್ತನಿಗೆ ಸಾಂಕೇತಿಕವಾಗಿ ಮೇಣದ ಬತ್ತಿಗಳನ್ನು ಹಚ್ಚಲಾಗುತ್ತದೆ. ಕೆಲವರು ತಮ್ಮ ಹರಕೆಗಳನ್ನು ಪೂರ್ಣಗೊಳಿಸಲು ಮೇಣದ ಬತ್ತಿಗಳನ್ನು ಹಚ್ಚುತ್ತಿದ್ದರು. ಸಂತ ಪೇತ್ರರ ಚರ್ಚ್‍ನಲ್ಲಿ ಫಾದರ್ ಆಂಟೋನಿ ಡಿಸೋಜಾ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರವಚನ ನೀಡಿದರು.

ಸಂತ ಪೇತ್ರರ ಚರ್ಚ್‍ನಲ್ಲಿ ಯೇಸು ಕ್ರಿಸ್ತನ ಜನನ ವೃತ್ತಾಂತ ತಿಳಿಸುವ ಬೊಂಬೆಗಳು ಹಾಗೂ ವಸ್ತು ಪ್ರದರ್ಶನ ಗಮನ ಸೆಳೆದವು. ನಗರದ ಮಾರುಕಟ್ಟೆ ರಸ್ತೆಯ ಸುಮಿತ್ರಾ ಸ್ಮಾರಕ ದೇವಾಲಯದಲ್ಲಿ ತಾಲ್ಲೂಕಿನ ಪಾಲನಜೋಗಿಹಳ್ಳಿ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿರುವ ಚರ್ಚ್‍ಗಳಲ್ಲಿ ಕ್ರಿಸ್‍ಮಸ್ ಆಚರಣೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT