ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಸವಾಡಿ: ದೇವಾಲಯಗಳಲ್ಲಿ ವಿಶೇಷ ಪೂಜೆ

Last Updated 28 ಆಗಸ್ಟ್ 2022, 3:05 IST
ಅಕ್ಷರ ಗಾತ್ರ

ಕನಸವಾಡಿ (ದೊಡ್ಡಬಳ್ಳಾಪುರ): ಇಲ್ಲಿನ ಶನಿದೇವರ ದೇವಾಲಯ ಸೇರಿದಂತೆ ವಿವಿಧೆಡೆ ಶ್ರಾವಣ ಮಾಸದ ಕೊನೆಯ ಶನಿವಾರ ವಿಶೇಷ ಪೂಜೆಗಳು ನಡೆದವು. ಶ್ರಾವಣ ಮಾಸದ ಕೊನೆಯ ಅಮಾವಾಸ್ಯೆಯೂ ಆಗಿದ್ದರಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಶನಿದೇವರ ದರ್ಶನ ಪಡೆದರು.

ಸುಮಾರು 14 ವರ್ಷಗಳ ನಂತರ ಶ್ರಾವಣ ಮಾಸದ ಅಮಾವಾಸ್ಯೆಯಂದು ಶನಿವಾರ ಬಂದಿದೆ. ಹೀಗಾಗಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಇದೇ ರೀತಿ 2025ರಲ್ಲಿ ಇದೇ ರೀತಿಯ ಯೋಗ ಕೂಡಿಬರಲಿದೆ ಎಂದು ಭಕ್ತರೊಬ್ಬರು ತಿಳಿಸಿದರು.

ಭಕ್ತರ ನೂಕುನುಗ್ಗಲು ಉಂಟಾಗದಂತೆ ಸರತಿ ಸಾಲಿನಲ್ಲಿ ಬರುವಂತೆ ವ್ಯವಸ್ಥೆ ಮಾಡಲಾಗಿತ್ತು. ದೇವಾಲಯದ ಒಳಭಾಗದಲ್ಲಿ ವಿವಿಧ ಹೂವುಗಳಿಂದ ಇಡೀ ದೇವಾಲಯವನ್ನು ಅಲಂಕರಿಸಲಾಗಿತ್ತು. ದೇವರ ದರ್ಶನಕ್ಕೆ ಬಂದಿದ್ದ ಎಲ್ಲಾ ಭಕ್ತರಿಗೆ ದೇವಾಲಯದಿಂದ ನಡೆಸಲಾಗುತ್ತಿರುವ ಅನ್ನದಾಸೋಹ ಭವನದಲ್ಲಿ ಪ್ರಸಾದ ಸೌಲಭ್ಯ
ಕಲ್ಪಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT