ನೀರು ತುಂಬಿಸುವ ಯೋಜನೆಗೆ ವೇಗ: ಸಂಸದ

7

ನೀರು ತುಂಬಿಸುವ ಯೋಜನೆಗೆ ವೇಗ: ಸಂಸದ

Published:
Updated:
Prajavani

ವಿಜಯಪುರ: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದು, ಸ್ಥಳೀಯ ಆಡಳಿತ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಸಂಸದ ವೀರಪ್ಪ ಮೊಯಿಲಿ ತಿಳಿಸಿದರು.

ಸಮೀಪದ ಮಂಡಿಬೆಲೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದರು.

ತೀವ್ರ ನೀರಿನ ಅಭಾವ ಕಾಡುತ್ತಿರುವ ಬಯಲು ಸೀಮೆ ಭಾಗದಲ್ಲಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳಿಗೆ ವೇಗ ನೀಡಲಾಗಿದೆ. ಎತ್ತಿನಹೊಳೆ ಯೋಜನೆಗೂ ಸರ್ಕಾರದ ಬಜೆಟ್ ನಲ್ಲಿ ಅನುದಾನ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಕೋಟ್ಯಂತರ ವೆಚ್ಚದಲ್ಲಿ ಕಾಮಗಾರಿ ಸಾಗುತ್ತಿದೆ ಎಂದರು.

ಈಗಾಗಲೇ ಕೋಲಾರ ಜಿಲ್ಲೆ ಕೆರೆಗಳಿಗೆ ಕೆ.ಸಿ.ವ್ಯಾಲಿ, ಚಿಕ್ಕಬಳ್ಳಾಪುರ ಭಾಗಕ್ಕೆ ಎಚ್.ಎನ್. ವ್ಯಾಲಿ ಯೋಜನೆಯಡಿ ನೀರು ತರಲು ಎಲ್ಲ ಸಿದ್ಧತೆ ನಡೆದಿದೆ ಎಂದರು.

ಕೋಲಾರದ ಭಾಗಕ್ಕೆ ನೀರು ತಲುಪಿದೆ. ರೈತ ಮುಖಂಡರೊಬ್ಬರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿರುವುದರಿಂದ ವಿಳಂಬವಾಗುತ್ತಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಪಿ.ಅನಂತಕುಮಾರಿ ಚಿನ್ನಪ್ಪ, ಕೆ.ಸಿ.ಮಂಜುನಾಥ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭಾರತಿ ಲಕ್ಷ್ಮಣಗೌಡ, ಉಪಾಧ್ಯಕ್ಷೆ ನಂದಿನಿ ವೆಂಕಟೇಶ್, ಕೆಪಿಸಿಸಿ ಸದಸ್ಯ ಬಿ.ಚೇತನ್ ಗೌಡ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ನಾರಾಯಣಪ್ಪ, ಕೃಷಿಕ ಸಮಾಜದ ತಾಲ್ಲೂಕು ಉಪಾಧ್ಯಕ್ಷ ಮಂಡಿಬೆಲೆ ದೇವರಾಜಪ್ಪ, ಚಿನ್ನಪ್ಪ, ಲಕ್ಷ್ಮಣಗೌಡ, ಎಪಿಎಂಸಿ ನಿರ್ದೇಶಕ ಸುಧಾಕರ್, ಧರ್ಮಪುರ ಕೃಷ್ಣಪ್ಪ, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !