ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ದೇವನಹಳ್ಳಿ: ಮಾರ್ಚ್ 10ರಂದು ಮಹಿಳೆಯರಿಗೆ ಕ್ರೀಡಾಕೂಟ

Last Updated 9 ಮಾರ್ಚ್ 2023, 3:59 IST
ಅಕ್ಷರ ಗಾತ್ರ

ದೇವನಹಳ್ಳಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ಜಿಲ್ಲೆಯ ಮಹಿಳೆಯರಿಗೆ ಮಾರ್ಚ್ 10ರಂದು ಬೆಳಿಗ್ಗೆ 9.30ಗಂಟೆಗೆ ಪಟ್ಟಣದ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ.

ಜಿಲ್ಲೆಯ ಮಹಿಳೆಯರು ಅಂದು ಬೆಳಿಗ್ಗೆ 9.30ಗಂಟೆಗೆ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಂಡು ಹೆಸರು ನೋಂದಣಿ ಮಾಡಿಕೊಳ್ಳಬಹುದು. ಸ್ಪರ್ಧೆಗಳು ಬೆಳಿಗ್ಗೆ 11.00 ಗಂಟೆಗೆ ಪ್ರಾರಂಭವಾಗಲಿವೆ. ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಮಹಿಳೆಯರು ಭಾಗವಹಿಸಲು ಕೋರಲಾಗಿದೆ.

ಕ್ರೀಡೆಗಳ ವಿವರ: 16-19 ವರ್ಷ ಒಳಪಟ್ಟವರಿಗೆ- ಕ್ರಿಕೆಟ್ (ಗುಂಪು). ಭಾಗವಹಿಸುವವರ ಸಂಖ್ಯೆ 12, 19 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಹಗ್ಗಜಗ್ಗಾಟ (ಗುಂಪು). ಭಾಗವಹಿಸುವವರ ಸಂಖ್ಯೆ 8, 19-40 ವರ್ಷ ಒಳಪಟ್ಟ ಮಹಿಳೆಯರಿಗೆ ಹಗ್ಗಜಗ್ಗಾಟ (ಗುಂಪು) 8, ಮ್ಯೂಸಿಕಲ್ ಚೇರ್, ಮೆಮೋರಿ ಟೆಸ್ಟ್, ಬಾಲ್‌ ಇನ್ ದಿ ಬಕೆಟ್, 50 ಮೀ. ವಾಕ್‌ ರೇಸ್, ಹೂಪ್ಸ್ರಿಲೇ, 40 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಮ್ಯೂಸಿಕಲ್ ಚೇರ್, ಮೆಮೋರಿ ಟೆಸ್ಟ್, ಬಾಲ್‌ ಇನ್ ದಿ ಬಕೆಟ್, 50 ಮೀ. ವಾಕ್‌ರೇಸ್, ಹೂಪ್ಸ್ರಿಲೇ ಸ್ಪರ್ಧೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ 98456 08598, 96327 78567ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT