ಬುಧವಾರ, ಫೆಬ್ರವರಿ 19, 2020
26 °C

ಬೆಂ.ಗ್ರಾ.ಜಿಲ್ಲೆ: ಕ್ರೀಡಾಪಟುಗಳ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2020–21ನೇ ಸಾಲಿನ ಬೆಂಗಳೂರು ಗ್ರಾಮಾಂತರ ಕ್ರೀಡಾಶಾಲೆ ಮತ್ತು ನಿಲಯಗಳಿಗೆ ಜಿಲ್ಲಾಮಟ್ಟದಿಂದ ಆಯ್ಕೆಯಾಗಿರುವ ಕ್ರೀಡಾಪಟುಗಳನ್ನು ಫೆ. 11 ಮತ್ತು 12ರಂದು ಕಿರಿಯರ ವಿಭಾಗ ಹಾಗೂ 13ರಂದು ಹಿರಿಯರ ವಿಭಾಗದ ಕ್ರೀಡಾಪಟುಗಳಿಗೆ ವಿಭಾಗಮಟ್ಟದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈಗಾಗಲೇ ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಕ್ರೀಡಾ ಪಟುಗಳು ತಮ್ಮ ಬ್ಯಾಂಕ್ ಖಾತೆಯ ಪ್ರತಿಯೊಂದಿಗೆ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಠಡಿ ಸಂಖ್ಯೆ:112, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110, ದೂರವಾಣಿ: 080 29787443 ಹಾಗೂ ಎಂ.ಪ್ರಭು ಮೊಬೈಲ್‌: 9945029942 ಶ್ರೀಧರ್ ಮೊಬೈಲ್‌: 91415 72528ನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಆರ್.ಗೀತಾ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)