ಗ್ರಾಮೀಣ ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ ಅಗತ್ಯ: ಆರ್.ಎಸ್. ಸೀತಾರಾಮು

7

ಗ್ರಾಮೀಣ ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ ಅಗತ್ಯ: ಆರ್.ಎಸ್. ಸೀತಾರಾಮು

Published:
Updated:
Deccan Herald

ಚನ್ನಪಟ್ಟಣ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕ್ರೀಡೆಯಲ್ಲಿ ಸೂಕ್ತವಾದ ತರಬೇತಿ ದೊರೆತರೆ ಅವರು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವಷ್ಟು ಸಾಮರ್ಥ್ಯ ಹೊಂದಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಸೀತಾರಾಮು ಹೇಳಿದರು.

ತಾಲ್ಲೂಕಿನ ಬೈರಾಪಟ್ಟಣ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ‘ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕಬಡ್ಡಿ ಹಾಗೂ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ’ಗಳಿಗೆ ಚಾಲನೆ ನೀಡಿ ಮಾತನಾಡಿದರು.

ಗ್ರಾಮೀಣ ವಿದ್ಯಾರ್ಥಿಗಳು ಕ್ರೀಡೆ ಬಗ್ಗೆ ಆಸಕ್ತಿ ಹಾಗೂ ಸಾಧನೆ ಮಾಡುವ ಛಲ ಹೊಂದಿದ್ದಾರೆ. ಆದರೆ ಅವರಿಗೆ ಪ್ರತಿಭೆಯನ್ನು ಹೊರಹಾಕಲು ಸೂಕ್ತ ತರಬೇತಿ ಸಿಗುತ್ತಿಲ್ಲ. ಅಂತಹ ಸೂಕ್ತ ವಾತಾವರಣವನ್ನು ದೈಹಿಕ ಶಿಕ್ಷಣ ಶಿಕ್ಷಕರು ನಿರ್ಮಾಣ ಮಾಡಬೇಕು ಎಂದರು.

ಶಾಲೆಯ ಮುಖ್ಯಶಿಕ್ಷಕಿ ಮೀನಾಕ್ಷಿ ಮಾತನಾಡಿ, ಕ್ರೀಡೆಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುವುದರಿಂದ ಮನುಷ್ಯನ ಮಾನಸಿಕ ಒತ್ತಡ ನಿವಾರಣೆಯಾಗಿ, ದೇಹ ಸದೃಢವಾಗುತ್ತದೆ. ಎಲ್ಲ ಮಕ್ಕಳೂ ಕ್ರೀಡೆಯಲ್ಲಿ ಭಾಗವಹಿಸಿ ಸಾಧನೆಯತ್ತ ಮುಖ ಮಾಡಬೇಕು ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರೇವಣ್ಣ, ಗ್ರಾಮದ ಮುಖಂಡ ತಿಮ್ಮೇಗೌಡ, ಮಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್, ಟೆಕ್ಕೀಸ್ ಟೀಂ ಅಧ್ಯಕ್ಷೆ ಆರ್. ನವ್ಯಶ್ರೀ, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಕೆಂಪರಾಜು, ಮಾಧ್ಯಮಕ ಶಿಕ್ಷಕರ ಸಂಘದ ಅಧ್ಯಕ್ಷ ರಂಗನಾಥ, ವಿವಿಧ ಶಾಲೆಗಳ ಮುಖ್ಯಶಿಕ್ಷಕರಾದ ವಿನೋದ, ನಂ.ಶಿವಲಿಂಗಯ್ಯ, ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು, ಎಸ್‌ಡಿಎಂಸಿ ಸದಸ್ಯರು ಭಾಗವಹಿಸಿದ್ದರು.

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !