ದೇವನಹಳ್ಳಿ: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ–01 ಬುಧವಾರ ಸುಗಮವಾಗಿ ಆರಂಭವಾಗಿತು. ಜಿಲ್ಲೆಯಾದ್ಯಂತ 52 ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ನಡೆಯಿತು.

ಪ್ರಥಮ ಭಾಷೆ ಕನ್ನಡ, ಉರ್ದು, ತೆಲುಗು ಹಾಗೂ ಇಂಗ್ಲಿಷ್ ವಿಷಯಗಳ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 13,630 ವಿದ್ಯಾರ್ಥಿಗಳಲ್ಲಿ 13,518 ಮಂದಿ ಪರೀಕ್ಷೆ ಬರೆದಿದ್ದು, 112 ವಿದ್ಯಾರ್ಥಿಗಳು ಗೈರಾದರು.

ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ, ವೆಬ್ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಜಿಲ್ಲಾಧಿಕಾರಿ ಕಚೇರಿಯಿಂದಲೇ ಪರೀಕ್ಷಾ ಪ್ರಕ್ರಿಯೆಯನ್ನು ನಿಗಾದಲ್ಲಿ ಇಡಲಾಗಿತ್ತು.

ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿತ್ತು. ನಕಲು ತಡೆಗಟ್ಟಲು ಕಡ್ಡಾಯವಾಗಿ ಮೊಬೈಲ್ ಫೋನ್ ಬಳಕೆ ನಿಷೇಧಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಬೆಳಿಗ್ಗೆಯೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ, ಉತ್ಸಾಹದಿಂದ ಪರೀಕ್ಷೆ ಬರೆದರು. ಪೋಷಕರು ಮಕ್ಕಳನ್ನು ಕೇಂದ್ರಗಳಿಗೆ ಕರೆದುಕೊಂಡು ಬಂದು ಶುಭ ಹಾರೈಸಿದ ದೃಶ್ಯ ಸಾಮಾನ್ಯವಾಗಿತ್ತು. ಕೆಲವರು ಮಕ್ಕಳಿಗೆ ಆಶೀರ್ವಾದ ನೀಡಿ ಧೈರ್ಯ ತುಂಬುತ್ತಿರುವುದು ಕಂಡುಬಂತು.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರದ ಪರೀಕ್ಷಾ ಕೇಂದ್ರಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜಿನಪ್ಪ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು.

ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಸುಗಮವಾಗಿ ನಡೆದಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆದಿದ್ದಾರೆ
ಬೈಲಾಂಜಿನಪ್ಪ, ಉಪನಿರ್ದೇಶಕ, ಸಾರ್ವಜನಿಕ ಶಿಕ್ಷಣ ಇಲಾಖೆ

ಮಕ್ಕಳಿಗೆ ಗುಲಾಬಿ ನೀಡಿ ಸ್ವಾಗತ

ದೊಡ್ಡಬಳ್ಳಾಪುರ: ನಗರದ ಸರ್ಕಾರಿ ಪದವಿ ಪೂರ್ವ (ಪ್ರೌಢ ಶಾಲಾ ವಿಭಾಗ) ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಲಾಯಿತು.

ಧೈರ್ಯವಾಗಿ ಪರೀಕ್ಷೆ ಬರೆಯುವಂತೆ ಶುಭಕೋರಿದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಶಂಕರಯ್ಯ, ಉಪಪ್ರಾಂಶುಪಾಲರಾದ ದಾಕ್ಷಾಯಿಣಿ ಅವರು ಗುಲಾಬಿ ಹೂವುಗಳನ್ನು ನೀಡಿ ಸ್ವಾಗತಕೋರಿದರು.

ಪೋಷಕರು ಪರೀಕ್ಷಾ ಕೇಂದ್ರಗಳಿಗೆ ಮಕ್ಕಳನ್ನು ಬಿಟ್ಟು,ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ನೋಂದಣಿ ಸಂಖ್ಯೆ ಹುಡುಕಿ, ಕೊಠಡಿಗಳಿಗೆ ತೆರಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಮೊದಲ ದಿನದ ಪ್ರಥಮ ಭಾಷೆ (ಕನ್ನಡ) ವಿಷಯ ತಾಲ್ಲೂಕಿನಲ್ಲಿ ಸುಗಮವಾಗಿ ನಡೆದಿದೆ. ಯಾವುದೇ ಪರೀಕ್ಷಾ ಅಕ್ರಮಗಳ ಕುರಿತು ವರದಿಯಾಗಿಲ್ಲ. ಪ್ರಥಮ ಭಾಷೆ ಪರೀಕ್ಷೆಗೆ 25 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಪ್ರಥಮ ಭಾಷೆಗೆ 14 ಪರೀಕ್ಷಾ ಕೇಂದ್ರಗಳಲ್ಲಿ 3,701 ಹೊಸ ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 3,676 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಮಜ್ಜಿಗೆ ವಿತರಣೆ: ಪರೀಕ್ಷಾ ಕೆಂದ್ರಗಳಲ್ಲಿ ಲಾವಣ್ಯ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಶಿಕ್ಷಕ ವಿ.ಶಿವರಾಜ್, ಕರ್ನಾಟಕ ರಕ್ಷಣಾ ವೇದಿಕೆಯ ಬಿ.ಎಸ್.ಚಂದ್ರಶೇಖರ್ ಅವರ ಸಹಕಾರದಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಜ್ಜಿಗೆ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಲಾವಣ್ಯ ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಉಪನ್ಯಾಸಕ ತ್ರಿಭುವನ್, ರೋಜಿಪುರ ಶ್ರೀನಿವಾಸ್, ಸಹಾಯಕ ಮಂಜಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.