ದೊಡ್ಡಬಳ್ಳಾಪುರ: ಎಸ್ಎಸ್ಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಈಗಿರುವ ಗರಿಷ್ಠ 125 ಅಂಕಗಳನ್ನು ಯಾವುದೇ ಕಾರಣಕ್ಕೂ ಕಡಿತಗೊಳಿಸಬಾರದು ಎಂದು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ನಿರ್ದೇಶಕ ಹುಲಿಕಲ್ ನಟರಾಜ್ ಹೇಳಿದರು.

ತಾಲ್ಲೂಕು ಮತ್ತು ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಘಟಕದ ಸಹಯೋಗದಲ್ಲಿ ನಗರದ ಎಂಎಬಿಎಲ್ ಪ್ರೌಢಶಾಲೆಯಲ್ಲಿ ಗುರುವಾರ ಎಸ್ಎಸ್ಎಲ್ಸಿ ಕನ್ನಡ ವಿಷಯದಲ್ಲಿ 125 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು.

ಕನ್ನಡ ಭಾಷೆಯ ಮಹತ್ವಕ್ಕೆ ಧಕ್ಕೆ ತರುವ ಯಾವುದೇ ನಿರ್ಧಾರ ಖಂಡನೀಯ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಗಮನಕ್ಕೆ ಇದನ್ನು ತರಲಾಗಿದೆ ಎಂದರು.

ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ನಗರದ ಹೊರವಲಯದ ಬೆಸೆಂಟ್ ಪಾರ್ಕ್ನಲ್ಲಿ ತಾರಾಲಯ ನಿರ್ಮಾಣ, ಮಕ್ಕಳಿಂದಲೇ ಟೆಲಿಸ್ಕೋಪ್ ತಯಾರಿಕೆ ಕಾರ್ಯಾಗಾರ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ, ಡಿ.ಶ್ರೀಕಾಂತ, ಸ್ವಾಮಿ ವಿವೇಕಾನಂದ, ಬಿ.ಪಿ.ಪ್ರಿಯಾಂಕ, ನಂಜುಂಡೇಶ್ವರ ಸ್ವಾಮಿ, ಶರಣಯ್ಯ ಹಿರೇಮಠ, ಮುನಿರಾಜು, ಪಿ.ಗೋವಿಂದರಾಜು, ಎ.ಜಯರಾಮ, ಆರ್.ಗೋವಿಂದರಾಜು, ಪ್ರಮೀಳಾ ಮಹದೇವ್, ದಾದಾಫೀರ್, ಶಫೀರ್, ವೆಂಕಟರಾಜು, ದರ್ಗಾಜೋಗಹಳ್ಳಿ ಮಲ್ಲೇಶ್, ಮುಖ್ಯಶಿಕ್ಷಕ ಜಿ.ಸುರೇಶ್, ಕೋದಂಡರಾಮು, ಜಿ. ಬಸವರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.