ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ; 14 ವಿದ್ಯಾರ್ಥಿಗಳು ಗೈರು

Last Updated 22 ಸೆಪ್ಟೆಂಬರ್ 2020, 1:49 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಜೂನ್-ಜುಲೈ ತಿಂಗಳಲ್ಲಿ ನಡೆದಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ತಾಲ್ಲೂಕಿನ ಎರಡು ಕೇಂದ್ರಗಳಲ್ಲಿ ಸೋಮವಾರ ನಡೆಯಿತು. ಮೊದಲ ದಿನದ ಗಣಿತ ವಿಷಯದ ಪರೀಕ್ಷೆಯಲ್ಲಿ ಯಾವುದೇ ಪರೀಕ್ಷಾ ಅಕ್ರಮಗಳ ಕುರಿತು ವರದಿಯಾಗಿಲ್ಲ.

ಎರಡು ಪರೀಕ್ಷಾ ಕೇಂದ್ರಗಳಲ್ಲಿ 262 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ ಒಟ್ಟು 248 ವಿದ್ಯಾರ್ಥಿಗಳು ಹಾಜರಾಗಿದ್ದು, 14 ವಿದ್ಯಾರ್ಥಿಗಳು ಗೈರಾಗಿದ್ದಾರೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರುವುದನ್ನು ಪರಿಶೀಲಿಸಿ, ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನರ್‌ ಮೂಲಕ ವಿದ್ಯಾರ್ಥಿಗಳ ದೇಹದ ಉಷ್ಣತೆ ತಪಾಸಣೆ ಮಾಡಲಾಯಿತು. ಸ್ಯಾನಿಟೈಸರ್ ಹಾಕಿ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಯಿತು. ಪರೀಕ್ಷಾ ಕೇಂದ್ರಗಳಲ್ಲಿಯೂ ಸಾಕಷ್ಟು ಆಸನಗಳ ವ್ಯವಸ್ಥೆ ಮಾಡಿ, ವಿದ್ಯಾರ್ಥಿಗಳು ಅಂತರ ಕಾಪಾಡಿಕೊಂಡು ಬರೆಯುವಂತೆ ವ್ಯವಸ್ಥೆ ಮಾಡಲಾಗಿತ್ತು.

ಕೋವಿಡ್-19 ಲಕ್ಷಣಗಳು ಬಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಎರಡು ಕೊಠಡಿಗಳನ್ನು ಹಾಗೂ ಅಗತ್ಯ ಕೊಠಡಿ ಮೇಲ್ವಿಚಾರಕರನ್ನು ಮೀಸಲಿರಿಸಲಾಗಿತ್ತು. ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡಲಾಗಿತ್ತು.

ಪ್ರಥಮ ಪರೀಕ್ಷೆ ಪರಿಗಣನೆ: ಜುಲೈನಲ್ಲಿ ನಡೆದ ಪರೀಕ್ಷೆಯಲ್ಲಿ ಕೋವಿಡ್-19 ಕಾರಣದಿಂದ ಅನಾರೋಗ್ಯದಿಂದ ಪರೀಕ್ಷೆ ಬರೆಯದೇ ಇದ್ದ ಒಬ್ಬ ವಿದ್ಯಾರ್ಥಿಯನ್ನು ಇಂದು ಪ್ರಥಮ ಪರೀಕ್ಷೆ ಎಂದು ಪರಿಗಣಿಸಿ, ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT