ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಲಿಬೆಲೆ: ರಾಜ್ಯ ಹೆದ್ದಾರಿ ದುರಸ್ತಿಗೊಳಿಸಲು ಆಗ್ರಹ

Last Updated 9 ಜುಲೈ 2020, 16:45 IST
ಅಕ್ಷರ ಗಾತ್ರ

ಸೂಲಿಬೆಲೆ: ಪಟ್ಟಣದಿಂದ ಗಿಡ್ಡಪ್ಪನಹಳ್ಳಿ ಗ್ರಾಮಕ್ಕೆ ಹಾದು ಹೋಗುವ ರಸ್ತೆ ತುಂಬ ಗುಂಡಿಗಳು ಬಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಕೂಡಲೇ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಸೂಲಿಬೆಲೆ ಪಟ್ಟಣದಿಂದ ಗಿಡ್ಡಪ್ಪನಹಳ್ಳಿಗೆ ಹಾದು ಹೋಗುವ ರಾಜ್ಯ ಹೆದ್ದಾರಿ-35 ರಸ್ತೆ, ಮುಂದುವರಿದು ಹೊಸಕೋಟೆ ಕೈಗಾರಿಕ ಪ್ರದೇಶ, ಕೋಲಾರ ಹಾಗೂ ಮಾಲೂರು ಸೇರಿದಂತೆ ಅನೇಕ ನಗರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ಹಲವು ವಾಹನಗಳು ಈ ರಸ್ತೆಯಲ್ಲಿ ದಿನ ನಿತ್ಯ ಸಂಚರಿಸುತ್ತವೆ. ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿಯಾಗಿರುವ ಈ ರಸ್ತೆ ಹಲವು ವರ್ಷಗಳಿಂದ ಅಭಿವೃದ್ಧಿ ಹಾಗೂ ನಿರ್ವಹಣೆ ಕಾಣದಿರುವುದರಿಂದ ರಸ್ತೆ ತುಂಬ ಗುಂಡಿಗಳು ಬಿದ್ದಿವೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಸೂಲಿಬೆಲೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಾಮಫಲಕ ಖಾಸಗಿ ಬಳಕೆ: ರಾಜ್ಯ ಹೆದ್ದಾರಿ 35 ರ ಅಭಿವೃದ್ಧಿ ಯೋಜನೆಯ ವಿವರವನ್ನೊಳಗೊಂಡ ನಾಮಫಲಕದಲ್ಲಿ ಸ್ಥಳೀಯರೊಬ್ಬರು ತಮ್ಮ ಹೋಟೆಲ್ ಹೆಸರು ಮತ್ತು ವಿಳಾಸವನ್ನು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT