ಭಾನುವಾರ, ಜನವರಿ 24, 2021
24 °C

ಗ್ರಾಮದ ಮಧ್ಯೆ ದುರ್ವಾಸನೆ ಹೊಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಹೋಬಳಿಯ ಹಾರೋಹಳ್ಳಿ ಗ್ರಾಮ ಪಂಚಾಯಿತಿ ದೊಡ್ಡಮುದ್ದೇನಹಳ್ಳಿ ಗ್ರಾಮದಲ್ಲಿನ ನೀರಿನ ಸಿಸ್ಟನ್ ಬಳಿಯಲ್ಲಿ ನೀರು ಕುಂಟೆಯಂತೆ ನಿಂತಿದ್ದು, ದುರ್ವಾಸನೆ ಬೀರುತ್ತಿದೆ.

ಇದನ್ನು ತೆರವುಗೊಳಿಸಲಿಕ್ಕೆ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಅನೇಕ ಬಾರಿ ದೂರುಗಳು ಕೊಟ್ಟರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಸೂಕ್ತ ಚರಂಡಿಯ ವ್ಯವಸ್ಥೆಯಿಲ್ಲದ ಕಾರಣ, ಪ್ರತಿನಿತ್ಯ ನೀರು ಹಿಡಿಯುವ ಸಿಸ್ಟನ್ ಪಕ್ಕದಲ್ಲೆ ಕೊಳಚೆ ನೀರು ನಿಂತಿದೆ. ಸಂಜೆಯಾಗುತ್ತಿದ್ದಂತೆ ಸುತ್ತಮುತ್ತಲಿನ ಮನೆಗಳಲ್ಲಿ ನೆಮ್ಮದಿಯಿಂದ ವಾಸ ಮಾಡಲಿಕ್ಕೆ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನೀರು ಹಿಡಿಯುವಾಗ ಆಯತಪ್ಪಿ ಬಿದ್ದರೂ ಕೊಳಚೆ ನೀರಿನೊಳಗೆ ಬೀಳುವ ಸ್ಥಿತಿಯಿದೆ. ಇದನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಸ್ವಚ್ಛತೆ ಕಾಪಾಡಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಿ ಎಂದು ಹೇಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಜನರು ಆರೋಗ್ಯ ಸುಧಾರಣೆ ಮಾಡಿಕೊಳ್ಳುವುದು ಸಾಧ್ಯವೇ ಎಂದು ಸ್ಥಳೀಯ ನಿವಾಸಿ ಎಂ. ಸತೀಶ್ ಆಕ್ರೋಶ ವ್ಯಕ್ತಪಡಿಸಿದರು.

ಹಾರೋಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಮ್ಯಾ ಮಾತನಾಡಿ, ದೊಡ್ಡಮುದ್ದೇನಹಳ್ಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದೇವೆ. ಚರಂಡಿ ಕಾಮಗಾರಿ ಮಾಡಲಿಕ್ಕೆ ಜಾಗವಿಲ್ಲದ ಕಾರಣ ಗ್ರಾಮದ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇವೆ. 15ನೇ ಹಣಕಾಸು ಯೋಜನೆಯಡಿ ಅನುದಾನ ಮೀಸಲಿಟ್ಟು, ಕ್ರಿಯಾಯೋಜನೆ ತಯಾರಿಸಿದ್ದೇವೆ. ನಮಗೆ ಅನುಮೋದನೆ ಸಿಕ್ಕಿದ ಕೂಡಲೇ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.