ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲು ಗಣಿ‌ಗಾರಿಕೆಗೆ ಮೂಗುದಾರ

Last Updated 3 ಫೆಬ್ರುವರಿ 2021, 2:42 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಶಿವಮೊಗ್ಗ ಜಿಲ್ಲೆ ಹುಣಸೋಡು ಗ್ರಾಮದ ಬಳಿ ಕಲ್ಲುಗಣಿಯಲ್ಲಿ ನಡೆದ ಸ್ಫೋಟದ ಹಿನ್ನೆಲೆಯಲ್ಲಿ ಮಂಗಳವಾರ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ನಡೆಯುತ್ತಿರುವ ಕಲ್ಲುಗಣಿಕಾರಿಕೆ ಪ್ರದೇಶಗಳಿಗೆ ಡಿವೈಎಸ್‌ಪಿ ಟಿ.ರಂಗಪ್ಪ ಮಂಗಳವಾರ ಭೇಟಿ ನೀಡಿ ಕಲ್ಲು ತೆಗೆಯುವ ಸ್ಥಳದಲ್ಲಿನ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.

ಈ ಬಗ್ಗೆ ಮಾಹಿತಿ ನೀಡಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಮೂರು ಸ್ಥಳಗಳಲ್ಲಿ, ದೇವನಹಳ್ಳಿ ತಾಲ್ಲೂಕಿನಲ್ಲಿ 11 ಸ್ಥಳಗಳಲ್ಲಿ ಮಾತ್ರ ಅಧಿಕೃತವಾಗಿ ಕಲ್ಲುಗಣಿಗಾರಿಕೆ ನಡೆಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅನುಮತಿ ನೀಡಿದೆ. ಇಲ್ಲಿನ ಕಲ್ಲು ಗಣಿಯಲ್ಲಿ ಮನೆ ಕಟ್ಟಡ, ರಸ್ತೆಗಳ ನಿರ್ಮಾಣಕ್ಕೆ ಅಗತ್ಯ ಇರುವ ಎಂಸ್ಯಾಂಡ್‌ ಹಾಗೂ ಜಲ್ಲಿ ಕಲ್ಲು ಮಾಡಲಾಗುತ್ತಿದೆ. ಭೂಮಿಯಿಂದ ಕಲ್ಲು ತೆಗೆಯಲು ಸಂದರ್ಭದಲ್ಲಿ ಭಾರಿ ಶಬ್ಧ ಹಾಗೂ ಕಲ್ಲು ತೆಗೆಯುವ ಸುತ್ತಮುತ್ತಲಿನ ಗ್ರಾಮಗಳ ಮನೆಗಳಿಗೆ ಯಾವುದೇ ರೀತಿ ತೊಂದರೆ ಉಂಟಾಗದಂತೆ ಎಚ್ಚರ ವಹಿಸಬೇಕಿದೆ. ಕಲ್ಲಿನ ಸ್ಫೋಟಕ್ಕೆ ಬಳಸುವ ವಸ್ತುಗಳನ್ನು ಅಧಿಕೃತ ಪರವಾನಗಿದಾರರಿಂದಲೇ ಖರೀದಿಸು
ವಂತೆಯೂ ಸೂಚನೆ ನೀಡಲಾಗಿದೆ ಎಂದರು.

ಈಗ ನಡೆಯುತ್ತಿರುವ ಕಲ್ಲುಗಣಿಗಳಲ್ಲಿ ಬಹುತೇಕ ಸುರಕ್ಷಿತ ನಿಯಮಪಾಲಿಸುತ್ತಿರುವುದು ಕಂಡು ಬಂದಿದೆ. ಆದರೆ, ಕಲ್ಲು ಗಣಿ ನಡೆಯುತ್ತಿರುವ ಗ್ರಾಮಗಳ ಸುತ್ತಲಿನ ನಿವಾಸಿಗಳು ದೊಡ್ಡ ಪ್ರಮಾಣದಲ್ಲಿ ಸ್ಫೋಟಗಳನ್ನು ನಡೆಸುತ್ತಿರುವ ಬಗ್ಗೆ ದೂರುತ್ತಿದ್ದಾರೆ. ಈ ಬಗ್ಗೆ ತಜ್ಞರಿಂದ ಪರಿಶೀಲನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ವಿಜಯಪುರ ಸರ್ಕಲ್‌ ಇನ್‌ಸ್ಪೆಕ್ಟರ್‌ ಡಾ.ಮಲ್ಲಿಕಾರ್ಜನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT