ಮಂಗಳವಾರ, ಆಗಸ್ಟ್ 9, 2022
20 °C

ಮುಂಬರುವ ಜಿ.ಪಂ, ತಾಪಂನಲ್ಲಿ ಅಧಿಕಾರ ಹಿಡಿಯಲು ಕಾರ್ಯತಂತ್ರ: ನಿಖಿಲ್ ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಜ್ಜಾಗಲು ಜೆಡಿಎಸ್ ಪಕ್ಷಕ್ಕೆ ನವ ಚೈತನ್ಯ ತುಂಬಬೇಕಿದೆ. ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲು ಬೂತ್ ಮಟ್ಟದಿಂದ ಪಕ್ಷ ಸಂಘಟಿಸಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಪಟ್ಟಣದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಜೆಡಿಎಸ್ ಸದೃಢವಾಗಿ ಕಟ್ಟಲು ಕಾರ್ಯಕರ್ತರ ಪಡೆ ಹಗಲಿರುಳು ಶ್ರಮಿಸುತ್ತಿದೆ. ಈ ಬಾರಿ ರಾಜ್ಯದಲ್ಲಿ ಅಧಿಕಾರ ಹಿಡಿಯುವುದು ಖಚಿತ ಎನ್ನುವ ಮುನ್ಸೂಚನೆ ರಾಜ್ಯದ ಜನರು ನೀಡುತ್ತಿದ್ದಾರೆ ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಜೆಡಿಎಸ್ ಯುವ ಸಂಘಟನೆ ಮಾಡಿ ಯುವಕರ ಪಡೆಯನ್ನೇ ಕಟ್ಟಲಾಗುತ್ತಿದೆ. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಯುವಕರನ್ನು ಹೆಚ್ಚು ಸಂಘಟಿಸಿ ಯುವ ಘಟಕ ಮತ್ತು ತಾಲ್ಲೂಕು ಘಟಕಗಳ ಜತೆಗೂಡಿ ಚುನಾವಣೆ
ಯಲ್ಲಿ ಹೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯಕ್ರಮ ರೂಪಿಸಲಾಗಿದೆ. ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಮಾಡಿರುವ ಅಭಿವೃದ್ಧಿ ಕೆಲಸ ಪ್ರತಿಯೊಬ್ಬರಿಗೆ ಮನದಟ್ಟು ಮಾಡಬೇಕಾಗಿದೆ ಎಂದು ಅವರು ಹೇಳಿದರು.

ವಿಜಯಪುರ ಹೋಬಳಿ ಗೊಡ್ಲುಮುದ್ದೇನಹಳ್ಳಿ ಗ್ರಾಮದ ಜೆಡಿಎಸ್ ಮುಖಂಡ ಸುರೇಶ್ ಅವರ ಮನೆಯಲ್ಲಿ ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. 

ನಂತರ ಮಾತನಾಡಿದ ಅವರು, ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದ ಕಾರ್ಯವೈಖರಿ ಜನರಿಗೆ ಮನದಟ್ಟು ಮಾಡಿ, ಜನರ ಪ್ರೀತಿ ಗಳಿಸಿ ಜನರ ಸೇವೆಗೆ ಬರಲಿದ್ದೇವೆ ಎಂದರು. ಬಿಜೆಪಿ ಹಾಗೂ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ಆದರೆ, ನಮ್ಮ ಪಕ್ಷದಲ್ಲಿ ಅಂತಹ ಗೊಂದಲ ಇಲ್ಲ. ಎಚ್.ಡಿ.ಕುಮಾರಸ್ವಾಮಿ ಅವರೇ ನಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಆರ್.ಮುನೇಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಪಿಎಲ್.ಡಿ ಬ್ಯಾಂಕ್ ಅಧ್ಯಕ್ಷ ಮುನಿರಾಜು, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ನಾಗೇಶ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ದೊಡ್ಡಸಣ್ಣೆ ಮುನಿರಾಜು, ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಮುನಿಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಶೈಲಜಾ, ವೆಂಕಟಗಿರಿಕೋಟೆ ಗ್ರಾಮ ಪಂಚಾಯಿತಿ ಸದಸ್ಯ ಆರ್.ಅಮರನಾಥ್, ಸುರೇಶ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಕಲ್ಯಾಣ್ ಕುಮಾರ್ ಬಾಬು ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು