ಆನೇಕಲ್: ‘ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಶೀಘ್ರದಲ್ಲಿ ಘೋಷಣೆಯಾಗುವ ಕಾರಣ ಬಿಜೆಪಿ ಕಾರ್ಯಕರ್ತರು ಸಂಘಟಿತರಾಗಿ ಕೆಲಸ ಮಾಡುವ ಮೂಲಕ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಬೂತ್‌ಮಟ್ಟದಿಂದ ಸಂಘಟನೆ ಬಲಪಡಿಸಬೇಕು’ ಎಂದು ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ತಿಳಿಸಿದರು.

ಅವರು ತಾಲ್ಲೂಕಿನ ಅತ್ತಿಬೆಲೆಯಲ್ಲಿ ಬಿಜೆಪಿ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ವಿವಿಧ ಮೋರ್ಚಾಗಳ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದರು.

‘ಆನೇಕಲ್ ಕ್ಷೇತ್ರದ ವ್ಯಾಪ್ತಿಯಲ್ಲಿ ಪಕ್ಷಕ್ಕೆ ಭದ್ರ ಬುನಾದಿಯಿದೆ. ಹಾಗಾಗಿ ನೂತನವಾಗಿ ಅಧಿಕಾರ ಸ್ವೀಕರಿಸಿರುವ ಪದಾಧಿಕಾರಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು. ಈ ಮೂಲಕ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು’ ಎಂದರು.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್‌ರೆಡ್ಡಿ ಮಾತನಾಡಿ, ‘ಆನೇಕಲ್ ತಾಲ್ಲೂಕಿನಲ್ಲಿ ಪಕ್ಷವನ್ನು ಸಮರ್ಥವಾಗಿ ಸಂಘಟಿಸಿ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ 20ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕು. ಜಿಲ್ಲಾ ಪಂಚಾಯಿತಿ-ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಿದ್ಧಗೊಳಿಸಬೇಕು. ಪಕ್ಷ ಕಟ್ಟುವ ನಿಟ್ಟಿನಲ್ಲಿ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಗುರುತರದ ಜವಾಬ್ದಾರಿಯಿದೆ’ ಎಂದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎನ್.ಬಸವರಾಜು, ಹೊರ ವರ್ತುಲ ರಸ್ತೆ ಪ್ರಾಧಿಕಾರದ ಅಧ್ಯಕ್ಷ ಸಿ.ಮುನಿರಾಜು, ಆನೇಕಲ್ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಜಯಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.