ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ಅನುಮಾನಾಸ್ಪದ ಸಾವು!

Last Updated 26 ಫೆಬ್ರುವರಿ 2023, 4:47 IST
ಅಕ್ಷರ ಗಾತ್ರ

ಆನೇಕಲ್: ತಾಲೂಕಿನ ಸರ್ಜಾಪುರ ಸಮೀಪದ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ.

ಮೃತನನನ್ನು ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಅಭಿಷೇಕ್ (26) ಎಂದು ಗುರುತಿಸಲಾಗಿದೆ. ಈತ ಮಹಾರಾಷ್ಟ್ರ ಮೂಲದವನು ಎಂದು ತಿಳಿದು ಬಂದಿದೆ.

ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿದ್ಯಾರ್ಥಿ ನಿಲಯ ಮತ್ತು ಬಸ್‌ ಪ್ರಯಾಣ ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದ ಅಭಿಷೇಕ್ ಕುಸಿದು ಬಿದ್ದ, ಕೂಡಲೇ ಆತನನನ್ನು ಆಸ್ಪತ್ರೆಗೆ ಸೇರಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಆತ ಮೃತಪಟ್ಟಿದ್ದಾನೆ.

ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ವಿದ್ಯಾರ್ಥಿ ಮೃತಪಟ್ಟಿಲ್ಲ. ವಿಶ್ವವಿದ್ಯಾಲಯದ ಉನ್ ಮುಕ್ತ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ತಯಾರಿ ನಡೆಸಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎಂದು ವಿಶ್ವವಿದ್ಯಾಲಯದ ಮೂಲಗಳು ತಿಳಿಸಿವೆ. ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT