‘ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯ’

ಭಾನುವಾರ, ಮೇ 19, 2019
34 °C
ಪರಿವರ್ತನೆ-2019 ವ್ಯಕ್ತಿ ವಿಕಸನ ಬೇಸಿಗೆ ಶಿಬಿರ ಕಾರ್ಯಕ್ರಮ

‘ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯ’

Published:
Updated:
Prajavani

ವಿಜಯಪುರ: ವಿದ್ಯಾರ್ಥಿಗಳು ಈ ದೇಶದ ಭವಿಷ್ಯದ ಪ್ರಜೆಗಳು, ಅವರಲ್ಲಿ ಏನು ಬೇಕಾದರೂ ಸಾಧಿಸಬಹುದಾದಂತಹ ಕೌಶಲಗಳು ಅಡಗಿವೆ. ಅವುಗಳನ್ನು ಹೊರಗೆ ತರುವಂತಹ ಪ್ರಾಮಾಣಿಕ ಪ್ರಯತ್ನಗಳಾದಾಗ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ ಎಂದು ಪ್ರಭಂಜನ ಶಿಕ್ಷಣ ಟ್ರಸ್ಟಿನ ಅಧ್ಯಕ್ಷ ಡಾ. ವಿ.ಎನ್. ರಮೇಶ್ ಹೇಳಿದರು.

ಇಲ್ಲಿನ ಶೃಂಗೇರಿ ಶಾರದಾ ವಿದ್ಯಾಸಂಸ್ಥೆಯ ಆವರಣದಲ್ಲಿ ವೆಂಕಟಮ್ಮ, ವಿ.ಆರ್. ನಾರಾಯಣಪ್ಪ ಸೇವಾ ಪ್ರತಿಷ್ಠಾನ, ಜೇಸಿಐ ವಿಜಯಪುರ, ಭಾರತೀಯ ಸೀನಿಯರ್ ಛೇಂಬರ್ ವಿಜಯಪುರ ಲೀಜನ್ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಹತ್ತು ದಿನಗಳ ‘ಪರಿವರ್ತನೆ-2019 ವ್ಯಕ್ತಿ ವಿಕಸನ ಬೇಸಿಗೆ ಶಿಬಿರ’ವನ್ನು ಉದ್ಘಾಟನೆ ಮಾಡಿ ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಅಗಾಧವಾದ ಶಕ್ತಿ ಅಡಗಿದೆ. ಅದನ್ನು ಉಪಯೋಗಿಸುವಂತಹ ಕಲೆಯನ್ನು ಅವರಿಗೆ ಕಲಿಸಬೇಕು. ವಿದ್ಯಾರ್ಥಿ  ದೆಸೆಯಲ್ಲಿ ಏನು ಬೇಕಾದರೂ ಕಲಿತುಕೊಳ್ಳುವಂತಹ ಸಾಮರ್ಥ್ಯವನ್ನು ಅವರು ಹೊಂದಿರುತ್ತಾರೆ. ಕಲಿಕೆಯ ಜೊತೆಗೆ ಸಮಾಜದಲ್ಲಿ ಸಾಧಿಸಬಹುದಾದಂತಹ ಕ್ರೀಡೆ, ಜಾನಪದ, ಕಲೆ, ಸಾಹಿತ್ಯ, ಸಂಸ್ಕೃತಿ, ವಿಜ್ಞಾನ, ತಂತ್ರಜ್ಞಾನ, ಸಮೂಹ ಮಾಧ್ಯಮ, ಇವೆಲ್ಲವುಗಳ ಕುರಿತು ಅವರಿಗೆ ಪ್ರತ್ಯೇಕವಾದ ಶಿಬಿರಗಳ ಮೂಲಕ ಅರಿವು ಮೂಡಿಸಬೇಕು ಎಂದರು.

ವಿದ್ಯಾರ್ಥಿಗಳು ಪರಿಪೂರ್ಣವಾದ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ಆದ್ದರಿಂದ ಮಕ್ಕಳು ಇಂತಹ ಶಿಬಿರಗಳ ಮೂಲಕ ವ್ಯಕ್ತಿ ವಿಕಸನ ಹೊಂದಿಕೊಂಡು ಪ್ರಯೋಜಕರಾಗಬೇಕು ಎಂದರು.

ಕನ್ನಡ ಕಲಾವಿದರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎನ್. ರಾಜಗೋಪಾಲ್ ಮಾತನಾಡಿ, ಬೇಸಿಗೆ ಶಿಬಿರದಲ್ಲಿ ನಡೆಯುವ ಕ್ರಿಯಾತ್ಮಕ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನ ಹಾಗೂ ಉತ್ತಮ ನಾಯಕತ್ವದ ಗುಣಗಳ ಬೆಳೆವಣೆಗೆಗೆ ಪೂರಕ ವಾತಾವರಣವನ್ನು ನಿರ್ಮಿಸುತ್ತವೆ ಎಂದರು.

ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಮುಂದಿನ ಭವಿಷ್ಯಕ್ಕಾಗಿ ಜೀವನದ ಮೌಲ್ಯಗಳ ಮಹತ್ವವನ್ನು ಅರಿತುಕೊಂಡರೆ ಮೌಲ್ಯಾಧಾರಿತ ಜೀವನ ನಡೆಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳ ಜೀವನದಲ್ಲಿ ಸಿಗುವಂತಹ ಅವಕಾಶಗಳನ್ನು ಸಂಪೂರ್ಣವಾಗಿ ಸದ್ಬಳಕೆ ಮಾಡಿಕೊಂಡರೆ ತಮ್ಮ ಗುರಿ ಸಾಧನೆಯ ಹಾದಿ ಸುಗಮವಾಗುತ್ತದೆ ಎಂದರು.

ಜೇಸಿಐ ಸಂಸ್ಥೆಯ ಮಹಿಳಾ ಅಧ್ಯಕ್ಷೆ ಕಾವ್ಯ ವೆಂಕಟೇಶ್ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿಗಳು ಸಮಯಕ್ಕೆ ಹೆಚ್ಚು ಬೆಲೆ ಕೊಡದೆ ಅನವಶ್ಯಕವಾಗಿ ಕಾಲಹರಣ ಮಾಡುತ್ತಾರೆ. ಇದರಿಂದ ವಿದ್ಯಾರ್ಥಿ ಜೀವನವೇ ಹಾಳಾಗುವ ಸಾಧ್ಯತೆ ಇದೆ. ಆದ್ದರಿಂದ ವಿದ್ಯಾರ್ಥಿಗಳು ಸಮಯದ ಮಹತ್ವ ಅರಿತು ಅದರ ಸದ್ಬಳಕೆ ಮಾಡಿಕೊಂಡಾಗ ಮಾತ್ರ ಮುಂದಿನ ಬದುಕು ಹಸನಾಗುತ್ತದೆ ಎಂದರು.

ಜೇಸಿಐ ಸಂಸ್ಧೆಯ ಅಧ್ಯಕ್ಷ ಎಲ್. ವೆಂಕಟೇಶ್, ರಾಯಲ್ ಪಬ್ಲಿಕ್ ಶಾಲೆಯ ಅಧ್ಯಕ್ಷೆ ಚಂದ್ರಮುಖಿ ರಮೇಶ್, ಸಂಪನ್ಮೂಲ ವ್ಯಕ್ತಿಗಳು, ಶಿಕ್ಷಕರು ಇದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !