ಸೋಮವಾರ, ಜನವರಿ 24, 2022
18 °C

ಬಸ್‍ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟ ಕ್ರಾಸ್‍ನಿಂದ ಕೊನಘಟ್ಟ ಮಾರ್ಗವಾಗಿ ಚಲಿಸುವ ಬಸ್‍ಗಳ ಕೊರತೆ ಉಂಟಾಗಿದ್ದು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಆಗುತ್ತಿದೆ. ಕೂಡಲೇ ಸಾರಿಗೆ ಸಂಸ್ಥೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಈ ಮಾರ್ಗದ ಬಸ್‍ಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮಿಪತಿ ಮಾತನಾಡಿ, ನಂದಿಬೆಟ್ಟ ಕ್ರಾಸ್‍ನಿಂದ ಕೊನಘಟ್ಟ ಮಾರ್ಗವಾಗಿ ಆಚಾರ್ಲಳ್ಳಿ, ಕೊನಘಟ್ಟ ಕೊಡಿಗೆಹಳ್ಳಿ, ಸೊಣ್ಣಮಾರನಹಳ್ಳಿ, ಹಮಾಮ್, ಶಿವಪುರ ಮಾರ್ಗವಾಗಿ ದೊಡ್ಡಬಳ್ಳಾಪುರ ತಲುಪಲು ಈ ಹಿಂದೆ ಬಸ್ ಸೌಲಭ್ಯವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗಗಳಿಂದ ನಗರಕ್ಕೆ ಶಾಲೆ, ಕಾಲೇಜುಗಳಿಗೆ ತೆರಳಲು ಸಮರ್ಪಕ ಸಾರಿಗೆ ಸೌಕರ್ಯವಿಲ್ಲದೆ ವಿದ್ಯಾರ್ಥಿಗಳು ಪದೇ ಪದೇ ಪ್ರತಿಭಟನೆ ನಡೆಸಬೇಕಾದ ಅನಿವಾರ್ಯತೆ
ಸೃಷ್ಟಿಯಾಗಿದೆ ಎಂದರು.

ಸಕಾಲಕ್ಕೆ ಬಸ್‍ಗಳು ಬಾರದೇ ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಿಗೆ ತೆರಳಲು ವಿಳಂಬವಾಗುತ್ತಿದೆ. ಈ ಕುರಿತು ಸಾರಿಗೆ ಇಲಾಖೆಗೆ ಮನವಿ ಸಲ್ಲಿಸಿದರು ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಈ ಮಾರ್ಗದಲ್ಲಿ ಸೂಕ್ತ ಬಸ್ ವ್ಯವಸ್ತೆ ಕಲ್ಪಿಸದಿದ್ದರೆ ಗ್ರಾಮಸ್ಥರೊಂದಿಗೆ ತೀವ್ರ ಹೋರಾಟ ನಡೆಸಲಾಗುವುದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು