ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೊಡ್ಡಬಳ್ಳಾಪುರ | ಸಾಲಬಾಧೆ: ಮೆಕ್ಯಾನಿಕ್ ಆತ್ಮಹತ್ಯೆ

Published 27 ಜೂನ್ 2024, 14:02 IST
Last Updated 27 ಜೂನ್ 2024, 14:02 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಸಾಲಬಾಧೆಗೆ ದ್ವಿಚಕ್ರ ವಾಹನ ಮೆಕ್ಯಾನಿಕ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ರೋಜಿಪುರದಲ್ಲಿ ಗುರುವಾರ ನಡೆದಿದೆ.

ಮೃತ ವ್ಯಕ್ತಿಯನ್ನು ರೋಜಿಪುರ ನಿವಾಸಿ ಪರ್ವಿಜ್ (38)ಎಂದು ಗುರುತಿಸಲಾಗಿದೆ. ನಗರದ ಒಕ್ಕಲಿಗರ ಕಲ್ಯಾಣ ಮಂಟಪ ಸಮೀಪ ದ್ವಿಚಕ್ರ ವಾಹನಗಳ ಮೆಕ್ಯಾನಿಕ್ ಅಂಗಡಿ ಇಟ್ಟುಕೊಂಡಿದ್ದರು. ಖಾಸಗಿಯಾಗಿ ಮಾಡಿಕೊಂಡಿದ್ದ ಸಾಲಕ್ಕೆ ಅತಿಯಾದ ಬಡ್ಡಿ ಕಟ್ಟಲಾಗದೆ ಬೇಸತ್ತು ಪರ್ವೀಜ್ ಸೋಮವಾರ ವಿಷ ಸೇವಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನಲ್ಲಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಪರ್ವೀಜ್ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT