ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಪ್ರಶ್ನೆಪತ್ರಿಕೆ ರವಾನೆ ವಾಹನಗಳಿಗೆ ಜಿಪಿಎಸ್‌

Last Updated 19 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಸಾಗಣೆ ಮಾಡುವ ಎಲ್ಲ ವಾಹನಗಳಿಗೂ ಜಿಪಿಎಸ್‌ ಟ್ರ್ಯಾಕಿಂಗ್‌ ವ್ಯವಸ್ಥೆ ಅಳವಡಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಮಾರ್ಚ್‌ನಲ್ಲಿ ಅಂತಿಮ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಸುಧಾರಣೆಯ ಕ್ರಮವಾಗಿ ಹೊಸ ವ್ಯವಸ್ಥೆ ಆರಂಭಿಸಲಾಗುತ್ತಿದೆ. ಪರೀಕ್ಷೆಯ ವಿವಿಧ ಹಂತಗಳಲ್ಲಿ ಭದ್ರತೆ ಹೆಚ್ಚಿಸುವುದರ ಜೊತೆಗೆ, ಪ್ರಶ್ನೆ ಪತ್ರಿಕೆಗಳು ಮುದ್ರಣಾಲಯದಿಂದ ಪರೀಕ್ಷಾ ಕೇಂದ್ರಗಳಿಗೆ ತಲುಪುವವರೆಗೆ ನಿಗಾ ಇಡಲಾಗುವುದು ಎಂದು ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸಾಗಿಸುವ ಎಲ್ಲ ವಾಹನಗಳಲ್ಲೂ ಜಿಪಿಎಸ್‌ ಟ್ರ್ಯಾಕಿಂಗ್‌ ಅಳವಡಿಕೆಗೆ ಜಿಲ್ಲಾ ಉಪನಿರ್ದೇಶಕರು ಸೂಕ್ತ ವ್ಯವಸ್ಥೆ ಮಾಡಬೇಕು. ಇದಕ್ಕಾಗಿ ₹ 1 ಲಕ್ಷದವರೆಗೆ ವೆಚ್ಚ ಮಾಡಬಹುದು ಎಂದು ನಿರ್ದೇಶಕರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT