ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತೃಭಾಷೆಯಲ್ಲೇ ಸಿಗಲಿ ಗುಣಮಟ್ಟದ ಶಿಕ್ಷಣ: ಸುಧಾಮೂರ್ತಿ

ತಿಂಡ್ಲು ಗ್ರಾಮದಲ್ಲಿ ₹2 ಕೋಟಿ ವೆಚ್ಚದ ಕಾಮಗಾರಿಗೆ ಸುಧಾಮೂರ್ತಿ ಚಾಲನೆ
Published 23 ಫೆಬ್ರುವರಿ 2024, 5:59 IST
Last Updated 23 ಫೆಬ್ರುವರಿ 2024, 5:59 IST
ಅಕ್ಷರ ಗಾತ್ರ

ದೇವನಹಳ್ಳಿ: ಗುಣಮಟ್ಟದ ಶಿಕ್ಷಣ ಮಾತೃ ಭಾಷೆಯಲ್ಲಿ ದೊರೆತರೆ ಮಾತ್ರವೇ ಸುಭದ್ರವಾದ ದೇಶ ನಿರ್ಮಾಣ ಸಾಧ್ಯ. ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದ ಗ್ರಾಮೀಣ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೆ ಹೋಗಿ ಉಜ್ವಲ ಭಾರತ ನಿರ್ಮಾಣ ಮಾಡಬೇಕು ಎಂದು ಇನ್ಪೋಸಿಸ್‌ ಫೌಂಡೇಷನ್‌ ಅಧ್ಯಕ್ಷೆ ಸುಧಾಮೂರ್ತಿ ತಿಳಿಸಿದರು.

ತಾಲ್ಲೂಕಿನ ಕುಂದಾಣ ಹೋಬಳಿಯ ತಿಂಡ್ಲು ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ₹2 ಕೋಟಿ ವೆಚ್ಚದ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೊಂದು ಹಳ್ಳಿಯಲ್ಲಿಯೂ ವಿದ್ಯಾದೇಗುಲವೂ ತಲೆ ಎತ್ತಬೇಕು. ರಾಜ್ಯದ್ಯಾಂತ್ಯ ಈಗಾಗಲೇ ಸಾಕಷ್ಟು ಶಾಲೆಗಳು, ಗ್ರಂಥಾಲಯಗಳನ್ನು ನಿರ್ಮಿಸಲಾಗಿದ್ದು, ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆಗಳ ಮೌಲ್ಯವರ್ಧನೆಗೆ ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್‌.ಎಂ. ಆನಂದ್‌ಕುಮಾರ್‌, ಪಿಡಿಒ ಪ್ರಕಾಶ್, ಜಾಲಿಗೆ ಗ್ರಾ.ಪಂ ಮಾಜಿ ಅಧ್ಯಕ್ಷೆ ಸೌಮ್ಯ ಬಾಬು, ಗ್ರಾ.ಪಂ ಸದಸ್ಯೆ ಲಕ್ಷ್ಮಮ್ಮ ಕೆಂಪಣ್ಣ, ವಿಎಸ್ಸೆಸ್ಸೆನ್‌ ಅಧ್ಯಕ್ಷ ಎಸ್‌.ರಾಜು, ಎಂಪಿಸಿಎಸ್‌ ಅಧ್ಯಕ್ಷ ಮುನಿಶಾಮಪ್ಪ, ಕಾರ್ಯದರ್ಶಿ ವಿನೋದ್‌ಕುಮಾರ್, ಶಾಲಾ ಮುಖ್ಯ ಶಿಕ್ಷಕ ನಾಗೇಶ್, ತಿಂಡ್ಲು ಬಾಬು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT