ಭಾನುವಾರ, ಡಿಸೆಂಬರ್ 8, 2019
25 °C

ದೇವನಹಳ್ಳಿ: ಸಮಸ್ಯೆಗಳ ಪರಿಹಾರಕ್ಕೆ ಪೂರಕ: ಜಿಲ್ಲಾಧಿಕಾರಿ ಕರೀಗೌಡ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ದೇವನಹಳ್ಳಿ: ‘ಪ್ರಜಾವಾಣಿ’ – ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳು ವತಿಯಿಂದ ದೇವನಹಳ್ಳಿ ನಗರದ ಗಿರಿಯಮ್ಮ ಸರ್ಕಲ್ ಬಳಿ ಇರುವ ಡಾ.ಬಿ.ಆರ್ ಆಂಬೇಡ್ಕರ್ ಭವನದಲ್ಲಿ ಡಿ.7 ರಂದು ಸಮಸ್ಯೆಗಳ ಪರಿಹಾರಕ್ಕೆ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿವೆ. ಸಮಸ್ಯೆಗಳ ಪರಿಹಾರಕ್ಕೆ ನಾನು ಭಾಗವಹಿಸುವೆ’ ಎಂದು ಜಿಲ್ಲಾಧಿಕಾರಿ ಕರೀಗೌಡ ತಿಳಿಸಿದರು.

ಜನಸ್ಪಂದನ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ದೇವನಹಳ್ಳಿ ಕಸಬಾ, ಚನ್ನರಾಯಪಟ್ಟಣ, ವಿಜಯಪುರ, ಕುಂದಾಣ, ತೂಬುಗೆರೆ ಹೋಬಳಿ ವ್ಯಾಪ್ತಿಯಲ್ಲಿನ ಜಲ್ವಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಉತ್ತಮ ಅವಕಾಶ ಇದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಪರಿಹಾರ ಕಂಡುಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ. ತಾವು ಬನ್ನಿ ಇತರರನ್ನು ಕರೆದುಕೊಂಡು ಬರಬೇಕು. ಇದೊಂದು ಪಕ್ಷಾತೀತವಾದ ಕಾರ್ಯಕ್ರಮವಾಗಲಿದೆ ಎಂದರು.

ಅನೇಕ ಸಮಸ್ಯೆಗಳ ಪರಿಹಾರಕ್ಕೆ ಮತ್ತು ನೇರವಾಗಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅಹವಾಲು ಸಲ್ಲಿಸುವ ಈ ಜನಸ್ಪಂದನ ಸಿಟಿಜನ್‌ಫಾರ್ ಚೇಂಜ್‌ನಲ್ಲಿ ಮುಕ್ತವಾಗಿ ಭಾಗವಹಿಸಿ ಎಂದು ತಿಳಿಸಿದರು.

ಪ್ರತಿಕ್ರಿಯಿಸಿ (+)