ಆದಿಜಾಂಬವ ಅಭಿವೃದ್ಧಿ ನಿಗಮಕ್ಕೆ ಬೆಂಬಲ

7
ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಹೋರಾಟ

ಆದಿಜಾಂಬವ ಅಭಿವೃದ್ಧಿ ನಿಗಮಕ್ಕೆ ಬೆಂಬಲ

Published:
Updated:
Deccan Herald

ವಿಜಯಪುರ: ‘ಇದೇ 12 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಧಿಕೃತವಾಗಿ ಜಾರಿಗೆ ಬರುತ್ತಿರುವ ಆದಿಜಾಂಬವ ಅಭಿವೃದ್ಧಿ ನಿಗಮಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ನ್ಯಾ.ಸದಾಶಿವ ಆಯೋಗದ ವರದಿಯ ಅನುಷ್ಠಾನದ ಕುರಿತು ನಿರಂತರ ಹೋರಾಟ ಮುಂದುವರೆಯಲಿದೆ’ ಎಂದು ಕರ್ನಾಟಕ ಮಾದಾರ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಮುನಿರಾಜು ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರದಿಯನ್ನು ಅನುಷ್ಠಾನಗೊಳಿಸುವ ಮೂಲಕ ಶೋಷಿತ ಸಮುದಾಯಗಳಿಗೆ ಜನಸಂಖ್ಯಾಧಾರಿತವಾಗಿ ನ್ಯಾಯವನ್ನು ಒದಗಿಸಬೇಕು ಎನ್ನುವ ಹೋರಾಟ ನಡೆದುಕೊಂಡು ಬರುತ್ತಿದೆ ಎಂದರು.

ಗೌರವಾಧ್ಯಕ್ಷ ಭಟ್ರೇನಹಳ್ಳಿ ನಾರಾಯಣಪ್ಪ ಮಾತನಾಡಿ, ‘ವರದಿಯನ್ನು ಅನುಷ್ಠಾನಗೊಳಿಸಬಾರದು ಎಂದು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಶತಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಪರಿಶಿಷ್ಟ ಜಾತಿಯ ಎಡ, ಬಲ ಎಲ್ಲರೂ ನಾವೆಲ್ಲರೂ ಅಣ್ಣತಮ್ಮಂದಿರು ಎನ್ನುವ ಭಾವನೆಯಿತ್ತು. ಭೇದವನ್ನು ಹುಟ್ಟಿಸಿ ಕೆರಳಿಸುವಂತಹ ಹೇಳಿಕೆ ಕೊಡುತ್ತಿರುವುದು ಸರಿಯಾದ ಬೆಳವಣಿಗೆಯಲ್ಲ’ ಎಂದರು.

ಮುಖಂಡ ಶಿವಕುಮಾರ್ ಮಾತನಾಡಿ, ಮಳವಳ್ಳಿಯ ಕಾಂಗ್ರೆಸ್ ಮುಖಂಡ ನರೇಂದ್ರ ಸ್ವಾಮಿ ಅವರು ನೀಡಿರುವ ಹೇಳಿಕೆ ಇಡೀ ಸಮುದಾಯಕ್ಕೆ ಅಪಮಾನ ಮಾಡುವಂತಿದೆ ಎಂದರು.

ನರೇಂದ್ರಸ್ವಾಮಿ ಅವರು, ಅಧಿಕಾರ ಮದದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರ ಪಕ್ಷದ ಹಿರಿಯ ನಾಯಕರು ಇಂತಹ ಹೇಳಿಕೆಗಳಿಗೆ ಕಡಿವಾಣ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಇಂತಹ ನಾಯಕರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಗರ ಘಟಕದ ಅಧ್ಯಕ್ಷ ತಿರುಮಲೇಶ್, ಸಂಘಟನಾ ಕಾರ್ಯದರ್ಶಿ ವೆಂಕಟಪ್ಪ, ಖಜಾಂಚಿ ಗಂಗಾಧರ್, ಗಂಗಣ್ಣ, ದಂಡಿಗಾನಹಳ್ಳಿ ನಾರಾಯಣಸ್ವಾಮಿ, ಕೆ. ಪಿಳ್ಳರೆಡ್ಡಿ, ವಿಜಯಪುರ ವೇಣು, ರವಿ, ರಾಮಕೃಷ್ಣ, ಮದ್ದೂರಪ್ಪ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !