ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಸಂಘದ ಮುಷ್ಕರಕ್ಕೆ ಬೆಂಬಲ

Last Updated 12 ಡಿಸೆಂಬರ್ 2020, 7:19 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆ ನಡೆಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದ್ದ ಮುಷ್ಕರ ಬೆಂಬಲಿಸಿ ತಾಲ್ಲೂಕಿನ ವಿವಿಧ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕಪ್ಪುಪಟ್ಟಿ ಧರಿಸಿ ಶುಕ್ರವಾರ ಕಾರ್ಯ ನಿರ್ವಹಿಸಿದರು.

ಕೇಂದ್ರ ಸರ್ಕಾರ ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆ ನಡೆಸಲು ಅವಕಾಶ ನೀಡಿದೆ. ಆದರೆ, ಅಡ್ಡದಾರಿಯಲ್ಲಿ ತರಬೇತಿ ಪಡೆದ ಪದವೀಧರರಿಂದ ನಡೆಯುವ ಶಸ್ತ್ರಚಿಕಿತ್ಸೆಯು ಸಾರ್ವಜನಿಕರ ಆರೋಗ್ಯವನ್ನು ಅಪಾಯಕ್ಕೆ ತಳ್ಳಲಿದೆ. ವೈದ್ಯಕೀಯ ಅಧ್ಯಯನ ವಿಭಾಗಗಳನ್ನು ಮಿಶ್ರಣಗೊಳಿಸುವ ಈ ನಿರ್ಧಾರ ಸರಿಯಲ್ಲ ಎಂದುಭಾರತೀಯ ವೈದ್ಯಕೀಯ ಸಂಘದ ರಾಜ್ಯ ಸಮಿತಿ ಸದಸ್ಯ ಡಾ.ಎಚ್.ಜಿ. ವಿಜಯಕುಮಾರ್ ದೂರಿದರು.

ಸರ್ಕಾರ ಆಯುರ್ವೇದ ಚಿಕಿತ್ಸಾ ಕ್ರಮಗಳನ್ನು ಅಲೋಪತಿ ಜತೆಗೆ ಸೇರಿಸಿ ಹಾಳುಗೆಡವಬಾರದು. ಕೂಡಲೇ ಈ ಆದೇಶ ಹಿಂಪಡೆಯಬೇಕು ಎಂದು ಭಾರತೀಯ ವೈದ್ಯಕೀಯ ಸಂಘ ಒತ್ತಾಯಿಸಿರುವ ಹಿನ್ನೆಲೆಯಲ್ಲಿ ಕಪ್ಪುಪಟ್ಟಿ ಧರಿಸಿ ಮುಷ್ಕರಕ್ಕೆ ಬೆಂಬಲ ನೀಡಲಾಗುತ್ತಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT