ವಿಜಯಪುರ: ಸಂಗೀತ ನಿರ್ದೇಶಕ ಹಂಸಲೇಖ ಹೇಳಿಕೆಗೆ ಬೆಂಬಲ
ವಿಜಯಪುರ: ಸಂಗೀತ ನಿರ್ದೇಶಕ ಹಂಸಲೇಖ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿರುವುದು ಖಂಡನೀಯ ಎಂದು ಬಿಜ್ಜವಾರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗರಾಜ್ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಹಂಸಲೇಖ ಅವರು ಸಮಾಜದ ಸ್ಥಿತಿಯನ್ನು ತಿಳಿಸಿದ್ದಾರೆ. ಪೇಜಾವರ ಸ್ವಾಮೀಜಿ ದಲಿತರ ಕಾಲೊನಿಗಳಿಗೆ ಭೇಟಿ ನೀಡಿದ ಮಾತ್ರಕ್ಕೆ ಜಾತಿ ವ್ಯವಸ್ಥೆ ತೊಲಗಿ ಹೋಗುವುದಿಲ್ಲ. ಅಸ್ಪೃಶ್ಯತೆ ನಿಲ್ಲುವುದಿಲ್ಲ. ಅವರು ಹೇಳಿದ ಕೆಲವು ಮಾತುಗಳಿಂದ ಮೇಲ್ವರ್ಗದ ಜನರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸುತ್ತಿರುವುದು ಸರಿಯಲ್ಲ ಎಂದರು.
ಶತಮಾನಗಳಿಂದ ಶೋಷಣೆಗೆ ಒಳಗಾಗಿ ದಿನನಿತ್ಯ ಅಸ್ಪೃಶ್ಯತೆಯೆಂಬ ನರಕದಲ್ಲಿ ಸಿಲುಕಿಕೊಂಡು ಪರದಾಡುತ್ತಿರುವ ಜನರಿಗೆ ನೋವಾಗುವುದಿಲ್ಲವೇ, ದೇಶದಲ್ಲಿ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂದು ಹೇಳಿದರು.
ಕೇಲವರು ಬಾಯಿ ಮಾತಿನಲ್ಲಿ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಹಂಸಲೇಖ ಅವರು ತಮಗಿರುವ ವಾಕ್ ಸ್ವಾತಂತ್ರ್ಯದ ನೆಲೆಗಟ್ಟಿನಲ್ಲಿ ವಾಸ್ತವಾಂಶವನ್ನು ಬಿಚ್ಚಿಟ್ಟಿದ್ದಾರೆ. ಸತ್ಯ ಹೇಳಿರುವುದೇ ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸುತ್ತಿರುವುದು ಖಂಡನೀಯ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.