ಸೋಮವಾರ, ಮಾರ್ಚ್ 8, 2021
27 °C

ಹೊಸಕೋಟೆಯಲ್ಲಿ ಶರತ್‌ ಬಚ್ಚೇಗೌಡ ಬೆಂಬಲಿಗರ ಮೇಲುಗೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ತಾಲ್ಲೂಕಿನ 26 ಗ್ರಾಮ ಪಂಚಾಯತಿಗೆ ನಡೆದ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಂದಿದ್ದು ಶಾಸಕ ಶರತ್ ಬಚ್ಚೇಗೌಡ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚುನಾಯಿತರಾಗಿದ್ದಾರೆ.

ನಗರದ ಪದವಿಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಯಿತು. ಪ್ರತಿ ಪಂಚಾಯಿತಿಯ ಎರಡು ಗ್ರಾಮಗಳ ಮತಗಳನ್ನು ಎಣಿಕೆಗೆ ತೆಗೆದುಕೊಂಡಿದ್ದು ಎಲ್ಲಾ ಗ್ರಾಮಗಳ ಎಣಿಕೆ ತಡವಾಗಿದೆ. ಬೆಳಿಗ್ಗಿನಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಾಲೇಜಿನ ಮೈದಾನದಲ್ಲಿ ಜಮಾಯಿಸಿ ತಮ್ಮ ನಾಯಕರ ಹಣೆಬರಹವನ್ನು ತಿಳಿಯಲು ಕಾತರರಾಗಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಜಯಗಳಿಸಿದ ಶಾಸಕ ಶರತ್ ಬಚ್ಚೇಗೌಡ ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಎಂ.ಟಿ.ಬಿ. ನಾಗರಾಜ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮೇಲೆ ನಾಯಕರ ಕೊರತೆ ಎದುರಿಸುತ್ತಿತ್ತು.

ಈ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಎರಡೂ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡ ಪರಿಣಾಮವಾಗಿ ಬಹುತೇಕ ಪಂಚಾಯಿತಿಗಳಲ್ಲಿ ಶರತ್ ಬಚ್ಚೇಗೌಡರ ಬೆಂಬಲಿತ ಆಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಸುಮಾರು 20ಕ್ಕಿಂತ ಹೆಚ್ಚಿನ ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿಯಲಿದ್ದೇವೆ ಎಂದು ಅವರ ಬೆಂಬಲಿಗರು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು