ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೋತ್ಸಾಹಧನ ಬಿಡುಗಡೆ

Last Updated 20 ಅಕ್ಟೋಬರ್ 2020, 2:54 IST
ಅಕ್ಷರ ಗಾತ್ರ

ವಿಜಯಪುರ: ‘ರೇಷ್ಮೆಗೂಡು ಮಾರುಕಟ್ಟೆಯಲ್ಲಿ ರೈತರಿಗೆ ಸಿಗಬೇಕಾಗಿರುವ ಎಲ್ಲ ಸೌಲಭ್ಯ ಒದಗಿಸಲು ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು’ ಎಂದು ರೇಷ್ಮೆ ಇಲಾಖೆಯ ಜಂಟಿ ನಿರ್ದೇಶಕ ಎಸ್.ವಿ. ಕುಮಾರ್ ಸೂಚಿಸಿದರು.

ಇಲ್ಲಿನ ರೇಷ್ಮೆಗೂಡು ಮಾರುಕಟ್ಟೆಗೆ ಭೇಟಿ ನೀಡಿದ್ದ ಅವರು, ಸರ್ಕಾರದಿಂದ ಬಿಡುಗಡೆಯಾಗಿರುವ ಪ್ರೋತ್ಸಾಹಧನ ಸೇರಿದಂತೆ ರೈತರಿಗೆ ಸಿಗುತ್ತಿರುವ ಸೌಲಭ್ಯ, ಸ್ವಚ್ಛತೆ, ರೀಲರ್‌ಗಳು ಮತ್ತು ರೈತರ ಸಮಸ್ಯೆ ಆಲಿಸಿದ ನಂತರ ಮಾತನಾಡಿದರು.

ಕೊರೊನಾ ಸಂಕಷ್ಟದ ನಡುವೆಯೂ ರೇಷ್ಮೆಬೆಳೆ ಬೆಳೆಯುವಲ್ಲಿ ರೈತರು ತೊಡಗಿಸಿಕೊಂಡಿ
ದ್ದಾರೆ. ಇದರಿಂದ ಆರ್ಥಿಕವಾಗಿ ರೈತರಿಗೆ ಸ್ವಲ್ಪಮಟ್ಟಿಗೆ ಹೊಡೆತ ಕಡಿಮೆಯಾಗಿದೆ.ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ರೈತರಿಗೆ ಸಿಗಬೇಕಾಗಿರುವ ಪ್ರೋತ್ಸಾಹಧನ ₹ 30 ಕೋಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಮಾಹಿತಿ ನೀಡಿದರು.

ರೇಷ್ಮೆ ಮಾರುಕಟ್ಟೆಯ ಉಪ ನಿರ್ದೇಶಕಿ ಆಯಿಷಾ ಖಾನಂ ಮಾತನಾಡಿ, ‘ಮಾರುಕಟ್ಟೆಯಲ್ಲಿ ಶುದ್ಧೀಕರಣವಾಗಬೇಕು. ವಿದ್ಯುತ್ ಸಮಸ್ಯೆ, ಸಿ.ಸಿ. ಕ್ಯಾಮೆರಾಗಳನ್ನು ದುರಸ್ತಿಗೊಳಿಸಬೇಕು. ಮಾರುಕಟ್ಟೆಗೆ ₹ 1.20 ಕೋಟಿ ಪ್ರೋತ್ಸಾಹಧನ ಬಂದಿತ್ತು.
₹ 300ಕ್ಕಿಂತಲೂ ಕಡಿಮೆ ಬೆಲೆಗೆ ಗೂಡು ಮಾರಾಟ ಮಾಡಿರುವ ದೇಶೀಯ ತಳಿಯ 1 ಕೆ.ಜಿಗೆ ₹ 30, ದ್ವಿತಳಿ ಗೂಡಿಗೆ ₹ 50ರಂತೆ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ’ ಎಂದರು.

ಎಡಿಎಸ್ ಮುನಿರಾಜು, ಅಮರನಾಥ್, ಪ್ರದೀಪ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT