ಸರಹದ್ದು ಸಮಸ್ಯೆ ಇಬ್ಬರು ಪಿಎಸ್‌ಐಗಳ ಅಮಾನತು
ದೊಡ್ಡಬಳ್ಳಾಪುರ: ನ.22 ರಂದು ತಾಲ್ಲೂಕಿನ ಅಪ್ಪಕಾರನಹಳ್ಳಿ ಗ್ರಾಮದ ರಸ್ತೆ ಬದಿಯ ಟಾಟಾ ಏಸ್ ವಾಹನದಲ್ಲಿ ಮೃತ ದೇಹ ಪತ್ತೆಯಾಗಿದ್ದ ಸಂದರ್ಭದಲ್ಲಿ ಸರಹದ್ದಿನ ಗೊಂದಲದಿಂದ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ವಿಳಂಭ ಮಾಡಿದ್ದರ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳ ಹಿನ್ನೆಲೆಯಲ್ಲಿ ಇಬ್ಬರು ಸಬ್‌ಇನ್‌ಸ್ಪೆಕ್ಟರ್‌ಗಳನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ಆದೇಶ ಮಾಡಿದ್ದಾರೆ.
ಅಮಾನತ್ತಿಗೆ ಒಳಗಾಗಿರುವವರು ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಪೊಲೀಸ್ ಠಾಣೆ ಸಬ್‌ಇನ್‌ಸ್ಪೆಕ್ಟರ್ ಅರುಣ್‌ಕುಮಾರ್, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸಬ್‌ಇನ್‌ಸ್ಪೆಕ್ಟರ್ ಮಂಜೇಗೌಡ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.