ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಒತ್ತುವರಿ ಪರಿಶೀಲಿಸಿದ ತಹಶೀಲ್ದಾರ್‌

Last Updated 28 ಜನವರಿ 2021, 1:46 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹೊನ್ನಾಘಟ್ಟ ಗ್ರಾಮದಿಂದ ಕೋಳೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸಾರ್ವಜನಿಕ ರಸ್ತೆಗೆ ಅಡ್ಡಲಾಗಿ ತಂತಿಬೇಲಿ ನಿರ್ಮಿಸಿರುವ ಬಗ್ಗೆ ಗ್ರಾಮಸ್ಥರಿಂದ ದೂರು ಬಂದಿದ್ದ ಹಿನ್ನೆಲೆಯಲ್ಲಿ ಬುಧವಾರ ಸ್ಥಳಕ್ಕೆ ತಹಶೀಲ್ದಾರ್‌ ಟಿ.ಎಸ್‌. ಶಿವರಾಜ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಬಗ್ಗೆ ಮಾಹಿತಿ ನೀಡಿದ ತಹಶೀಲ್ದಾರ್‌ ಶಿವರಾಜ್‌, ದಶಕಗಳಿಂದಲೂರೂಢಿಗತವಾಗಿರುವ ರಸ್ತೆಗೆ ತಂತಿಬೇಲಿ ನಿರ್ಮಿಸಿ ಗುಂಡಿಗಳನ್ನು ನಿರ್ಮಿಸಿರುವುದು ತಪ್ಪು. ಇದರಿಂದ ಗ್ರಾಮಸ್ಥರಿಗೆ ತೊಂದರೆಯಾಗಿದೆ. ಅಲ್ಲದೆ ಈ ರಸ್ತೆಯನ್ನು ಜಿಲ್ಲಾ ಪಂಚಾಯಿತಿಯಿಂದ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಹೀಗಾಗಿ ತುರ್ತಾಗಿ ಸರ್ವೇ ನಡೆಸಿ ರಸ್ತೆ ಒತ್ತುವರಿ ಮಾಡಿಕೊಂಡಿರುವ ಹಾಗೂ ರಸ್ತೆಯಲ್ಲಿ ಗುಂಡಿಗಳನ್ನು ತೋಡಿರುವವರ ವಿರುದ್ಧ ದೂರು ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಗ್ರಾಮದಲ್ಲಿನ ಎಲ್ಲರೂ ಸರ್ಕಾರಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಆದರೆ, ದುರುದ್ದೇಶಪೂರಕವಾಗಿ ನಮ್ಮ ವಿರುದ್ಧ ಮಾತ್ರ ದೂರುತ್ತಿದ್ದಾರೆ. ರಸ್ತೆ ಒತ್ತುವರಿ ಮಾಡಿಕೊಂಡಿರುವ ಎಲ್ಲರನ್ನು ತೆರವು ಮಾಡಿಸಿದರೆ ನಾವು ಸಹ ರಸ್ತೆಯನ್ನು ಬಿಟ್ಟು ಕೊಡುತ್ತೇವೆ ಎಂದು ರಸ್ತೆ ಒತ್ತುವರಿ ಆರೋಪ ಎದುರಿಸುತ್ತಿರುವ ಹೊನ್ನಾಘಟ್ಟ ಗ್ರಾಮದ ರುದ್ರೇಶ್‌ಗೌಡ ತಿಳಿಸಿದರು.

ಗ್ರಾಮಾಂತರ ಪೊಲೀಸ್‌ ಠಾಣೆ ಸಬ್ ‌ಇನ್‌ಸ್ಪೆಕ್ಟರ್‌ ಮಂಜುನಾಥ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT